ಕೋಡಿ: ಅಗಲಿದ ಮುಹಮ್ಮದ್ ರಫೀಕ್ ರಿಗೆ ಶೃದ್ಧಾಂಜಲಿ ಸಭೆ
ಕೋಡಿ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಕೋಡಿ ಹಾಜಿ ಮೊಹಿದ್ದೀನ್ ಬ್ಯಾರಿ ಸ್ಮಾರಕ ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮುಹಮ್ಮದ್ ರಫೀಕ್ ಅವರ ಶೃದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರಹ್ಮಾನ್, ಸಂಯೋಜಕ ಆಕಾಶ್, ಸಲಹಾ ಮಂಡಳಿ ಸದಸ್ಯರಾದ ಹಾಜಿ ಅಬುಷೇಕ್ ಸಾಹೇಬ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story