ಮೀಸಲಾತಿ ಕುರಿತು ರಣದೀಪ್ ಸಿಂಗ್ ಸುರ್ಜೆವಾಲ ಹೇಳಿಕೆ ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ.26: ಮೀಸಲಾತಿ ಕುರಿತು ಕಾಂಗ್ರೆಸ್ ಪಕ್ಷದ ರಂದೀಪ್ ಸುರ್ಜೆವಾಲ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.
"ಮೊಟ್ಟ ಮೊದಲಿಗೆ, ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ಕಾಂಗ್ರೆಸ್ ಪಕ್ಷದ ಸುರ್ಜೆವಾಲಾ ಅಥವಾ ಕಾಂಗ್ರೆಸ್ ಪಕ್ಷ ನೀಡಿರುವ ಹೇಳಿಕೆ ನ್ಯಾಯಾಂಗ ನಿಂದನೆ ಮತ್ತು ಆ ಮೂಲಕ ನ್ಯಾಯ ಒದಗಿಸಲು ತಡೆಒಡ್ಡಲು ಮಾಡಿರುವ ಪ್ರಯತ್ನವಾಗಿದೆ. ಸಂವಿಧಾನವು ಮೀಸಲಾತಿ ಯನ್ನು ಧರ್ಮದ ಆಧಾರದ ಮೇಲೆ ನೀಡುವುದನ್ನು ಆಲೋಚಿಸಿಲ್ಲ. ಡಾ.ಬಿ.ಆರ್. ಅಂಬೇಡ್ಕರ್ ಅವರು ಪ್ರಥಮ ತಿದ್ದುಪಡಿಯನ್ನು ಪರಿಚಯಿಸುವ ಸಂದರ್ಭದಲ್ಲಿ ಈ ಭಾಷಣ ಮಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
“ನ್ಯಾಯಾಲಯದಲ್ಲಿ ಮುಚ್ಚಳಿಕೆ ನೀಡಿದ್ದು ಏಕೆ ಎಂಬ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ನ್ಯಾಯಾಂಗ ಪ್ರಕ್ರಿಯೆಗಳ ಕುರಿತಂತೆ ನಿಮಗಿರುವ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಓಲೈಕೆ ರಾಜಕಾರಣ: ಆದರೆ ಐ.ಎನ್.ಸಿ ಕರ್ನಾಟಕ ಯಾವಾಗಲೂ ಓಲೈಕೆ ರಾಜಕಾರಣದಲ್ಲಿ ತೊಡಗಿದ್ದು, ಸಾಮಾಜಿಕ ನ್ಯಾಯ ಒದಗಿಸುವುದನ್ನು ಅರ್ಥಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ.
ನ್ಯಾಯಾಂಗ ನಿಂದನೆ: ಸರಕಾರವು, ಹಿರಿಯ ನ್ಯಾಯಮೂರ್ತಿಗಳನ್ನು ನೇಮಿಸಿಕೊಂಡು ತನ್ನ ನಿಲುವನ್ನು ಸಮರ್ಪಕವಾಗಿ ಸಮರ್ಥಿಸಿಕೊಳ್ಳುತ್ತಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸ ನಮಗಿದೆ. ಈ ರೀತಿಯ ಹೇಳಿಕೆಗಳ ಮೂಲಕ ನ್ಯಾಯ ವ್ಯವಸ್ಥೆಯನ್ನು ಕಲುಷಿತ ಗೊಳಿಸಲು ಪ್ರಯತ್ನಿಸಿದರೆ, ಅದು ನ್ಯಾಯಾಂಗ ನಿಂದನೆಯಾಗುತ್ತದೆ" ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
At the outset, the matter is in the Supreme Court and Statement made by Mr. Surjewala or the Congress Party is an attempt to prejudice the Court and thereby obstruct justice. The Constitution never contemplated reservation on the basis of Religion. The architect of the… https://t.co/6Yhc6R1n7B
— Basavaraj S Bommai (@BSBommai) April 26, 2023