Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧೀಜಿಯ ಹಿಂದೂಧರ್ಮ ಬೇಕೋ ಗೋಡ್ಸೆಯ...

ಗಾಂಧೀಜಿಯ ಹಿಂದೂಧರ್ಮ ಬೇಕೋ ಗೋಡ್ಸೆಯ ಹಿಂದುತ್ವ ಬೇಕೋ ಎಂಬ ಕವಲು ದಾರಿಯಲ್ಲಿ ರಾಷ್ಟ್ರ ನಿಂತಿದೆ: ಬಿ.ಕೆ. ಹರಿಪ್ರಸಾದ್

26 April 2023 11:23 PM IST
share
ಗಾಂಧೀಜಿಯ ಹಿಂದೂಧರ್ಮ ಬೇಕೋ ಗೋಡ್ಸೆಯ ಹಿಂದುತ್ವ ಬೇಕೋ ಎಂಬ ಕವಲು ದಾರಿಯಲ್ಲಿ ರಾಷ್ಟ್ರ ನಿಂತಿದೆ: ಬಿ.ಕೆ. ಹರಿಪ್ರಸಾದ್

ಭಟ್ಕಳ: ಮಹಾತ್ಮ ಗಾಂಧೀಜಿಯನ್ನು ಕೊಂದ ಗೋಡ್ಸೆಯ ಹಿಂದುತ್ವ, ಸರ್ವಧರ್ಮ ಸಮಾಭಾವ ಸಾರಿದ ಗಾಂದೀಜಿಯವರ ಹಿಂದೂ ಧರ್ಮ ಇವೆರಡರ ನಡುವೆ ಯಾವುದನ್ನು ಆಯ್ದುಕೊಳ್ಳಬೇಕು ಎಂಬ ಕವಲು ದಾರಿಯಲ್ಲಿ ರಾಷ್ಟ್ರ ನಿಂತುಕೊಂಡಿದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು. 

ಅವರು ಬುಧವಾರ ರಾತ್ರಿ ಮುರುಢೇಶ್ವರದ ಬೀನಾ ವೈದ್ಯ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ನಾಮಧಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಿದ್ದ ಚುನಾವಣ ಪ್ರಚಾರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

75 ವರ್ಷಗಳ ಕಾಲ ನಾವು ಯಾವುದೇ ಬೇಧಭಾವ ಇಲ್ಲದೆ ಅಣ್ಣತಮ್ಮಂದಿರರಂತೆ ಬದುಕಿ ಬಾಳಿದ್ದೇವೆ. ನಿಮಗೆ ಆ ಸಿದ್ಧಾಂತ ಬೇಕೆ ಅಥವಾ ಗಾಂಧೀಜಿಯನ್ನು ಕೊಂದ ನಾಥೋರಾಂ ಗೋಡ್ಸೆಯ ಸಿದ್ಧಾಂತ ಬೇಕೆ ? ಈಗ ನೀವು ಯಾವುದನ್ನು ಆಯ್ಕೆ ಮಾಡುತ್ತೀರಿ? ದುರ್ಬಲ ವರ್ಗದವರನ್ನು ತುಳಿದು ರಾಜಕೀಯ ಮಾಡುವಂತಹದ್ದು ಬಿಜೆಪಿಯ ಕರ್ಮವಾಗಿದೆ. ಹಿಂದುತ್ವಕ್ಕೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಿಂದೂ ಧರ್ಮವನ್ನು ಪಾಲನೆ ಮಾಡುತ್ತಿದ್ದ ಮಹಾತ್ಮಗಾಂಧಿ, ವಿವೇಕಾನಂದ, ಗುರುನಾನಕ ಮುಂತಾದವರು ಹಿಂದೂ ಧರ್ಮದ ಪರಿಪಾಲಕರು. ಹಿಂದೂತ್ವವನ್ನು ಮಾಡಿದಂತಹವರು ಸಾರ‍್ಕರ್, ಗೋಡ್ಸೆ, ನರೇಂದ್ರ ಮೋದಿ ಮತ್ತು ಅಮಿತ್ ಶಾ ರವರು. ಬಿಜೆಪಿ ಪಕ್ಷದಲ್ಲಿ ಯಾವ ರೀತಿಯ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು.  

ನಾಮಧಾರಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಎಲ್.ಎಸ್.ನಾಯ್ಕ ಮಾತನಾಡಿ, ನಮ್ಮ ಸಮಾಜ ಕಷ್ಟದಲ್ಲಿದ್ದಾಗ ಬೆಂಬಲಿಸಿ ಅವರ ಕಣ್ಣೀರು ಒರೆಸಿದಂತಹ ಅವರನ್ನು ಸಹಾಯ ಮಾಡಿದ ವ್ಯಕ್ತಿಯನ್ನು ನಾವೆಂದೂ ಕೈ ಬಿಡುವುದಿಲ್ಲ. ಅವರ ಬೆನ್ನಿಗಿದ್ದೇವೆ ಅವರನ್ನು ಬೆಂಬಲಿಸುತ್ತೇವೆ ಎಂಬ ಸಂದೇಶವನ್ನು ನಾನು ಈ ವೇದಿಕೆಯ ಮೂಲಕ ಸಮಾಜಕ್ಕೆ ನೀಡುತ್ತಿದ್ದೇನೆ ಎಂದು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಮಾಂಕಾಳ್ ಎಸ್. ವೈದ್ಯ ಪರ ಮಾತನಾಡಿದರು.

ಈ ಸಂದರ್ಭದಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ, ಮಹಿಳಾ ಕಾಂಗ್ರೇಸ್ ಮುಖಂಡೆ ನಯನಾ ನಾಯ್ಕ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
Next Story
X