ಹಿಂದೂ- ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಿ ಬದುಕಬೇಕು: ಬಿ.ಎಸ್. ಯಡಿಯೂರಪ್ಪ

ಹುಬ್ಬಳ್ಳಿ: 'ಹಿಂದೂ, ಮುಸ್ಲಿಮ್ ಹಾಗೂ ಕ್ರೈಸ್ತರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು' ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅವರು ಬುಧವಾರ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.
‘ಈ ಮತಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ 'ಭಾಗ್ಯಲಕ್ಷ್ಮಿ' ಯೋಜನೆಯ ಶೇ90ರಷ್ಟು ಪ್ರಯೋಜನವನ್ನು ಮುಸ್ಲಿಮ್ ಮಹಿಳೆಯರು ಪಡೆದಿದ್ದಾರೆ. ಈ ಕ್ಷೇತ್ರ ಅಭಿವೃದ್ಧಿಗೆ ನಮ್ಮ ಪಕ್ಷದ ಅಭ್ಯರ್ಥಿ ಡಾ.ಕ್ರಾಂತಿಕಿರಣ ಅವರನ್ನು ಗೆಲ್ಲಿಸಿ ಕೊಡಿ’ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಹಿಜಾಬ್, ಹಲಾಲ್ ವಿವಾದ ಅನಗತ್ಯ, ನಾನು ಬೆಂಬಲಿಸುವುದಿಲ್ಲ: ಬಿ.ಎಸ್. ಯಡಿಯೂರಪ್ಪ
''ಈ ಬಾರಿ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಪಕ್ಷವು ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
Next Story







