Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೋದಿ ಆನ್ ಲೈನ್ ಸಂವಾದ: ಮಂಗಳೂರಿನಿಂದಲೂ...

ಮೋದಿ ಆನ್ ಲೈನ್ ಸಂವಾದ: ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

27 April 2023 3:39 PM IST
share
ಮೋದಿ ಆನ್ ಲೈನ್ ಸಂವಾದ: ಮಂಗಳೂರಿನಿಂದಲೂ ಭಾಗಿಯಾದ ಬಿಜೆಪಿ ಕಾರ್ಯಕರ್ತರು

ಮಂಗಳೂರು, ಎ.27: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು. ಈ ಸಂವಾದ ಕಾರ್ಯಕ್ರಮದ ವೀಕ್ಷಣೆಗೆ ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುಧೀಂದ್ರ ಸಭಾಭವನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸಂವಾದ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗರಿಷ್ಠ ದಾಖಲೆಯ ಸ್ಥಾನಗಳನ್ನು ನೀಡಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಬೂತ್ ಮಟ್ಟದ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಇನ್ನೆರೆಡು ದಿನಗಳಲ್ಲಿ ಕರ್ನಾಟಕದ ಜನರ ದರ್ಶನಕ್ಕಾಗಿ, ಆಶೀರ್ವಾದ ಪಡೆಯಲು ಬರಲಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಎಲ್ಲಿ ಹೋದರೂ ಜನರ ಉತ್ಸಾಹ ಕಾಣುತ್ತಿದೆ. ಕರ್ನಾಟಕಕ್ಕೆ ಬಂದ ನಾಯಕರು, ಮುಖಂಡರು ಜನರ ವಿಶ್ವಾಸದ ಮಾತನಾಡುತ್ತಿದ್ದಾರೆ. ಇದಕ್ಕಾಗಿ ಕರ್ನಾಟಕ ಬಿಜೆಪಿಗೆ ಅಭಿನಂದನೆಗಳು. ಸಂಘಟನೆಯ ಶಕ್ತಿ ಅನಾವರಣಗೊಂಡಿದೆ ಎಂದರು.

ಹೆಚ್ಚು ಮತದಿಂದ ಗೆಲುವಿಗೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯನ್ನು ವಿಭಿನ್ನ ಪಕ್ಷವಾಗಿ ಗೆಲ್ಲಿಸಿ. ಬೂತ್‌ಗಳಲ್ಲಿ 10 ಮಹಿಳಾ, 10 ಪುರುಷ ಕಾರ್ಯಕರ್ತರನ್ನು ಜೊತೆಗೂಡಿಸಿ. ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಿ. ಹಿರಿಯರಿಗೆ ಗೌರವ ಸಲ್ಲಿಸಿ. ಕಿರಿಯರನ್ನು ಪ್ರೀತಿಯಿಂದ ಮಾತನಾಡಿಸಿ. ಬೂತ್ ಗೆಲುವು ಎಂದರೆ ಕುಟುಂಬಗಳ ಜೊತೆ ಮಾತುಕತೆ ಮತ್ತು ಜನರ ಒಲವಿನ ಗೆಲುವಾಗಲಿ ಎಂದು ಆಶಿಸಿದರು.

25 ವರ್ಷಗಳಲ್ಲಿ ಬಡತನಮುಕ್ತ, ವಿಕಸಿತ ದೇಶ ನಮ್ಮ ಗುರಿ. ಕೇವಲ ಅಧಿಕಾರ ಪಡೆಯುವುದಷ್ಟೇ ನಮ್ಮ ವಿರೋಧಿಗಳ ಗುರಿ ಎಂದು ತಿಳಿಸಿದರು. ಕರ್ನಾಟಕದಲ್ಲಿ ಬೆಂಗಳೂರಿನಂಥ ಅನೇಕ ಸ್ಟಾರ್ಟಪ್ ಹಬ್‌ಗಳ ನಿರ್ಮಾಣ ಆಗಲಿ. ಪೂರ್ಣ ಬಹುಮತದ ಸ್ಥಿರ ಸರಕಾರಕ್ಕಾಗಿ ಮತ ಕೇಳಬೇಕು ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಉಚಿತ ಕುರಿತ ಆಶ್ವಾಸನೆ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡುವವರನ್ನು ದೂರವಿಡಿ ಎಂದು ವಿನಂತಿಸಿದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸುಳ್ಳು ಆಶ್ವಾಸನೆ ನೀಡಿ ಅನುಷ್ಠಾನಕ್ಕೆ ತಾರದೆ ಇದ್ದುದನ್ನು ಜನರಿಗೆ ತಿಳಿಸಬೇಕು. ಹಿಮಾಚಲ ಪ್ರದೇಶ, ರಾಜಸ್ಥಾನಗಳಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕೀಯದ ಗ್ಯಾರಂಟಿಯನ್ನಷ್ಟೇ ನೀಡಬಲ್ಲದು. ಕಾಂಗ್ರೆಸ್ ವಾರಂಟಿ ಈಗಾಗಲೇ ಮುಗಿದಿದೆ ಎಂದು ವ್ಯಂಗ್ಯವಾಗಿ ತಿಳಿಸಿದರು.

800 ವರ್ಷಗಳ ಗುಲಾಮಿತನದ ಬಳಿಕ 1947ರಲ್ಲಿ ಸ್ವಾತಂತ್ರ್ಯ ಲಭಿಸಿತು. 25 ವರ್ಷಗಳ ಪ್ರಮುಖ ಆಂದೋಲನ ಅದರ ಹಿಂದಿತ್ತು. ಇದೀಗ 75 ವರ್ಷಗಳ ಬಳಿಕ ಅಮೃತ ಕಾಲಕ್ಕಾಗಿ ಪ್ರಯತ್ನ ಆರಂಭವಾಗಿದೆ. ಕರ್ನಾಟಕದ ವಿಕಾಸದ ಮೂಲಕ ಭಾರತದ ಅಭಿವೃದ್ಧಿ ಆಗಲಿದೆ. ಶಿವಮೊಗ್ಗ ಮತ್ತಿತರ ಕಡೆ ವಿಮಾನನಿಲ್ದಾಣ ಆರಂಭವಾಗಿದೆ. ಇದು ಇನ್ನಷ್ಟು ವೇಗ ಪಡೆಯಲು ಬಹುಮತದ ಬಿಜೆಪಿ ಸರಕಾರ ಬೇಕಿದೆ ಎಂದು ತಿಳಿಸಿದರು.

ಜನರ ಮನೆಮನೆಗೆ ತೆರಳಿ ಸರಕಾರದ ಸಾಧನೆಗಳನ್ನು ಮುಂದಿಡಬೇಕು; ಇದು ಬಿಜೆಪಿ ಗೆಲುವಿಗೆ ಪೂರಕವಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಶಿವಮೊಗ್ಗದ ವಿರೂಪಾಕ್ಷಪ್ಪ, ಚಿತ್ರದುರ್ಗದ ಫಕೀರಪ್ಪ, ಚಂದ್ರಶೇಖರ್ ವಿಜಯನಗರ, ದಕ್ಷಿಣ ಕನ್ನಡದ ಅರುಣ್ ಸೇಠ್, ಬೆಂಗಳೂರಿನ ಬಿ.ಆರ್.ಯೋಗೀಶ್ ಅವರ ಪ್ರಶ್ನೆಗಳಿಗೆ ಪ್ರಧಾನಿ ಉತ್ತರ ನೀಡಿದರು.

ಮಂಗಳೂರಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ಚುನಾವಣೆ ಸಮರ ಆರಂಭವಾಗಿದ್ದು, ಬಿಜೆಪಿ ಗೆಲುವು ಖಚಿತವಾಗಿದೆ. ಮಹಾಪ್ರಚಾರ ಅಭಿಯಾನದ ಮನೆಮನೆ ಭೇಟಿಯ ಮಧ್ಯೆ ಕಾರ್ಯಕರ್ತರಿಗೆ ಪ್ರೇರಣೆ ನೀಡಿ ಶಕ್ತಿವಂತರಾಗಿ ಉತ್ಸಾಹದಿಂದ ದುಡಿಯಲು ಶ್ರೇಷ್ಠ ಜನನಾಯಕ ಮೋದಿ  ಸಂವಾದದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.

share
Next Story
X