Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುಪಿ ಮಾದರಿ ಏನೆಂದು ಇಡೀ ಜಗತ್ತಿಗೆ...

ಯುಪಿ ಮಾದರಿ ಏನೆಂದು ಇಡೀ ಜಗತ್ತಿಗೆ ಗೊತ್ತಿದೆ, ನೀವು ಯಾವ ಮುಖ ಹೊತ್ತು ಮತ ಕೇಳ್ತೀರಿ?: ಆದಿತ್ಯನಾಥ್ ಗೆ ಸಿದ್ದರಾಮಯ್ಯ

27 April 2023 5:57 PM IST
share
ಯುಪಿ ಮಾದರಿ ಏನೆಂದು ಇಡೀ ಜಗತ್ತಿಗೆ ಗೊತ್ತಿದೆ, ನೀವು ಯಾವ ಮುಖ ಹೊತ್ತು ಮತ ಕೇಳ್ತೀರಿ?: ಆದಿತ್ಯನಾಥ್ ಗೆ ಸಿದ್ದರಾಮಯ್ಯ

ಬೆಂಗಳೂರು, ಎ. 27: ‘ಯೋಗಿ ಆದಿತ್ಯನಾಥರೆ ನೀವು ಯಾವ ಮುಖ ಹೊತ್ತು ರಾಜ್ಯದಲ್ಲಿ ಮತ ಕೇಳುತ್ತೀರಿ ಹೇಳಿ? ನಿಮ್ಮ ಅಂದಾದುಂದಿ ಆಡಳಿತ ನಡೆಸುವುದಕ್ಕಾಗಿ ದಕ್ಷಿಣದ ರಾಜ್ಯಗಳ ಜನರ ಜೀವ ಹಿಂಡಿ ಮೋದಿ ಸರಕಾರ ನಿಮಗೆ ಅನುದಾನಗಳನ್ನು ಕೊಡುತ್ತಿದೆ. ನಿಮ್ಮ ರಾಜ್ಯದ ಬಜೆಟ್‍ನ ಶೇ.50ರಷ್ಟು ಅನುದಾನವನ್ನು ಮೋದಿ ಸರಕಾರ ಕೊಡುತ್ತಿದೆ. ಆದರೆ, ಕರ್ನಾಟಕಕ್ಕೆ ಕೇವಲ ಶೇ.16.25ರಷ್ಟನ್ನು ಮಾತ್ರ ಕೊಡುತ್ತಿದೆ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟನೆ ನೀಡಿರುವ ಸಿದ್ದರಾಮಯ್ಯ, ‘ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್ ಬಿಜೆಪಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಂದಿದ್ದಾರೆ. ನಿನ್ನೆ ರಾಜ್ಯದ ಮಂಡ್ಯ ಮುಂತಾದ ಕಡೆ ಉತ್ತರ ಪ್ರದೇಶದ ಮಾದರಿಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಮಾದರಿ ಎಂದರೆ ಏನು ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ. ಆದರೂ ಅದರ ಬಗ್ಗೆ ಕರ್ನಾಟಕದಲ್ಲೂ ಪ್ರಸ್ತಾಪಿಸುವುದು ಹಾಸ್ಯಾಸ್ಪದ ಸಂಗತಿ’ ಎಂದು ಟೀಕಿಸಿದ್ದಾರೆ.

‘ಕೇಂದ್ರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ 6 ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ ಶೇ.66.4ರಷ್ಟಿದೆ. ಇದು 2016ರಲ್ಲಿ ಶೇ.63.2ರಷ್ಟಿತ್ತು. ಶೇ.3.2ರಷ್ಟು ಅಪೌಷ್ಟಿಕತೆಯನ್ನು ಹೆಚ್ಚಿಸಿ ಮಕ್ಕಳನ್ನು ರೋಗಗ್ರಸ್ತ ಮಾಡಿದ್ದು ಯೋಗಿ ಆದಿತ್ಯ ನಾಥ್ ಸಾಧನೆ. 2016ರಲ್ಲಿ ಉತ್ತರ ಪ್ರದೇಶದ ಮಹಿಳೆಯರ ಸರಾಸರಿ ಜೀವಿತಾವಧಿ 68.5ರಷ್ಟಿತ್ತು. 2019ರಲ್ಲಿ ಅದು ಶೇ.66.2ಕ್ಕೆ ಕುಸಿದಿದೆ. ಎಲ್ಲ ರಾಜ್ಯಗಳ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರ ಪ್ರದೇಶದಲ್ಲಿ ಕುಸಿಯುತ್ತಿದೆ. ಇದೇ ಅಲ್ಲವೆ ಆದಿತ್ಯನಾಥ್ ಮಾದರಿ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ತಲಾವಾರು ವಿದ್ಯುತ್ ಲಭ್ಯತೆಯು ಕರ್ನಾಟಕದಲ್ಲಿ 1184 ಕಿಲೋವ್ಯಾಟ್‍ಗಳಷ್ಟಿದ್ದರೆ, ಉತ್ತರ ಪ್ರದೇಶದಲ್ಲಿ ಕೇವಲ 642 ಕಿಲೋವ್ಯಾಟ್‍ಗಳಷ್ಟಿದೆ. ಆದಿತ್ಯನಾಥ್ ಸಿಎಂ ಆದ ಮೇಲೆ ಗಮನಾರ್ಹ ಬದಲಾವಣೆಯೇನೂ ಸಂಭವಿಸಿಲ್ಲ. ಅಭಿವೃದ್ಧಿಗೂ ವಿದ್ಯುತ್ ಬಳಕೆಗೂ ಸಂಬಂಧವಿದೆ. 2021ರ ದಾಖಲೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 3012 ತಜ್ಞ ವೈದ್ಯರುಗಳ ಹುದ್ದೆಗಳು ಮಂಜೂರಾಗಿದ್ದರೆ, ಕೆಲಸ ಮಾಡುತ್ತಿರುವವರು ಕೇವಲ 872ಜನ ಮಾತ್ರ. 2030 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಬೇಕಾದ ವೈದ್ಯರುಗಳ 1355ಹುದ್ದೆಗಳು ಖಾಲಿ ಇವೆ. ಜನರ ಆರೋಗ್ಯ ಸುಧಾರಿಸದೆ ರಾಜ್ಯವನ್ನು ಅಭಿವೃದ್ಧಿ ಮಾಡುವುದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಶತಮಾನಗಳಿಂದ ದಮನಿಸಲ್ಪಟ್ಟ ಜನರನ್ನು ಬಾಬಾಸಾಹೇಬರ ಆಶಯಗಳು, ಮಚ್ಚೇಂದ್ರನಾಥ್, ಗೋರಖ್‍ನಾಥರ, ಕಬೀರರ ಆಶಯಗಳಿಗೆ ವಿರುದ್ಧವಾಗಿ ದಮನಿಸಿ ನಾಶ ಮಾಡುವುದೆ ಉತ್ತರ ಪ್ರದೇಶ ಮಾದರಿಯೆಂಬುದನ್ನು ಆದಿತ್ಯನಾಥರು ಸಾಬೀತು ಮಾಡಿದ್ದಾರೆ. ಇದನ್ನು ಉತ್ತರ ಪ್ರದೇಶದ ಮಾದರಿ ಎನ್ನುವುದಕ್ಕಿಂತ ಆದಿತ್ಯನಾಥ್ ಮಾದರಿ ಎನ್ನಬೇಕಾಗುತ್ತದೆ. ಇಂಥ ಮಾದರಿಯನ್ನು ಕರ್ನಾಟಕದಲ್ಲಿ ಬಿತ್ತಲು ರಾಜ್ಯದ ಜನರು ಅವಕಾಶ ಕೊಡುವುದಿಲ್ಲ. ಇಲ್ಲಿ ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಕುವೆಂಪು, ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸುರಂತಹ ಧೀಮಂತರ ಮಾದರಿಗಳು ಕರ್ನಾಟಕದಲ್ಲಿದೆ. ಅವುಗಳನ್ನು ಬೇಕಿದ್ದರೆ ಆದಿತ್ಯನಾಥರು ಕಲಿತುಕೊಂಡು ಹೋಗಿ ಅಲ್ಲಿ ಅಳವಡಿಸಿಕೊಳ್ಳಲಿ. ಆಗಲಾದರೂ ಅಲ್ಲಿನ ದಮನಿತರಾದ ನನ್ನ ಸೋದರ ಜಾತಿ-ಜನಾಂಗಗಳ ಜನರು ತುಸು ನೆಮ್ಮದಿಯಾಗಿ ಊಟ ಮಾಡಿ, ದುಡಿಮೆ ಮಾಡಿ ಜೀವಿಸಲಿ’ ಎಂದು ಅವರು ಸಲಹೆ ನೀಡಿದ್ದಾರೆ.

‘ನೀವು ರಾಜ್ಯದಲ್ಲಿ ಹಲವು ಸುಳ್ಳು ಹೇಳಿದ್ದೀರಿ. ಸುಳ್ಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ನೀವು ಹೇಳಿದ ಸುಳ್ಳುಗಳಲ್ಲಿ ಪಿಎಫ್‍ಐ ವಿಚಾರವೂ ಸೇರಿದೆ. ಕರ್ನಾಟಕದಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆಗಳ ಕಾರ್ಯಕರ್ತರ ಮೇಲಿನ ಪ್ರಕರಣವನ್ನು ಬಿಜೆಪಿ ಸರಕಾರವೆ ಹಿಂಪಡೆದಿದೆ ಎಂದು ಬೊಮ್ಮಾಯಿ ಸರಕಾರವೆ ನನಗೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹೊನ್ನಾವರದಲ್ಲಿ ದಾಖಲಾಗಿದ್ದ ಪ್ರಕರಣವನ್ನು ದಿನಾಂಕ 2020ರ ಅಕ್ಟೋಬರ್ 13ರಂದು ಬಿಜೆಪಿ ಸರಕಾರ ಹಿಂದಕ್ಕೆ ಪಡೆದಿದೆ. ಇದಕ್ಕೆ ಏನು ಹೇಳುತ್ತೀರಿ ಆದಿತ್ಯನಾಥ್ ಅವರೆ? ನೀವು ಸುಳ್ಳು ಹೇಳುತ್ತಾ ಹೋಗಿ. ನಾವು ಸತ್ಯವೇನೆಂದು ನಿಮ್ಮ ಮುಖದ ಮುಂದೆ ಇಡುತ್ತೇವೆ. ಯಾರು ಸರಿ ಎಂದು ಜನರೆ ತೀರ್ಮಾನಿಸಲಿ’ ಎಂದು ಅವರು ತಿಳಿಸಿದ್ದಾರೆ.

share
Next Story
X