ದೇವದಾಸ್ ರಾವ್ ಕೂಡ್ಲಿಗೆ ದತ್ತಿ ಪುರಸ್ಕಾರ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದಿಂದ ನೀಡುವ ಯಕ್ಷ ಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರಕ್ಕೆ ಈ ಬಾರಿ ಉಡುಪಿಯ ಹಿರಿಯ ಯಕ್ಷಗಾನ ಕಲಾವಿದ ದೇವದಾಸ್ ರಾವ್ ಕೂಡ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.
ದೇವದಾಸ್ ಯಕ್ಷಗಾನ ಕೇಂದ್ರ ಉಡುಪಿಯ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ ಹಾಗೂ ದೇಶ ವಿದೇಶಗಳಲ್ಲಿ ಹಲವು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಮದ್ದಲೆ ವಾದಕರಾಗಿ, ಕಲಾವಿದರಾಗಿ ಸೇವೆಸಲ್ಲಿಸಿದ್ದಾರೆ. ಮೇ 5ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story