Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಟಾರ್ ಪಟ್ಟಿಯಲ್ಲಿಲ್ಲದ ನಟ ಸುದೀಪ್...

ಸ್ಟಾರ್ ಪಟ್ಟಿಯಲ್ಲಿಲ್ಲದ ನಟ ಸುದೀಪ್ ಖರ್ಚು ಯಾರ ಲೆಕ್ಕಕ್ಕೆ: ಆಪ್ ಪ್ರಶ್ನೆ

27 April 2023 6:32 PM IST
share
ಸ್ಟಾರ್ ಪಟ್ಟಿಯಲ್ಲಿಲ್ಲದ ನಟ ಸುದೀಪ್ ಖರ್ಚು ಯಾರ ಲೆಕ್ಕಕ್ಕೆ: ಆಪ್ ಪ್ರಶ್ನೆ

ಬೆಂಗಳೂರು, ಎ.27: ಬಿಜೆಪಿ ಪರ ಸುದೀಪ್ ಪ್ರಚಾರ ಮಾಡುತ್ತಿದ್ದು, ಹೆಲಿಕಾಪ್ಟರ್ ಮೂಲಕ ತೆರಳಿ, ಐಶಾರಾಮಿ ಕಾರುಗಳಲ್ಲಿ ಸುತ್ತಾಡುತ್ತಿದ್ದಾರೆ. ಇದಕ್ಕೆಲ್ಲ ಕನಿಷ್ಠ 15ರಿಂದ 40 ಲಕ್ಷ ರೂ.ಗಳಾದರೂ ಖರ್ಚಾಗಿರುತ್ತದೆ. ಈ ಖರ್ಚುಗಳನ್ನು ಚುನಾವಣಾ ಆಯೋಗವು ಯಾರ ಲೆಕ್ಕಕ್ಕೆ ಸೇರಿಸುತ್ತದೆ ಎಂದು ಎಎಪಿ ಪ್ರಶ್ನಿಸಿದೆ. 

ಗುರುವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ವಕೀಲರ ಘಟಕದ ಸದಸ್ಯ ಗಂಗಾಧರ್, ಖ್ಯಾತ ನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಮಾತ್ರ ಮತಯಾಚನೆ ಮಾಡುವುದು ಎಂದು ಹೇಳಿದ್ದರು. ಅಲ್ಲದೆ ಪಕ್ಷದ ಅಧಿಕೃತ ಸ್ಟಾರ್ ಪ್ರಚಾರಕದ ಪಟ್ಟಿಯಲ್ಲಿ ಸುದೀಪ್ ಹೆಸರಿಲ್ಲ. ಆದರೂ ಎ.26ರಂದು ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ತಿಪ್ಪೇಸ್ವಾಮಿ ಪ್ರಚಾರ ಮಾಡಿದ್ದಾರೆ ಎಂದರು. 

ಸ್ಥಳೀಯ ಚುನಾವಣಾ ಅಧಿಕಾರಿಗಳು ಬಿಜೆಪಿ ಪರವಾಗಿ ವರ್ತಿಸುತ್ತಿದ್ದು, ಆಮ್ ಆದ್ಮಿ ಪಾರ್ಟಿ ವಿರುದ್ಧ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಎಎಪಿ ಮುಖಂಡರು ನೀಡುವ ದೂರುಗಳಿಗೆ ಚುನಾವಣಾ ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತಿಲ್ಲ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಇಲ್ಲಿನ ಗಾಂಧಿನಗರ, ಬೆಂಗಳೂರು ದಕ್ಷಿಣ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿನಗರ ಕ್ಷೇತ್ರಗಳಲ್ಲಿ ಆರ್‍ಒಗಳು ಎಎಪಿಗೆ ನೋಟಿಸ್‍ಗಳನ್ನು ನೀಡಿ ಕಿರುಕುಳ ನೀಡುತ್ತಿದ್ದಾರೆ. ಮನೆಮನೆಗೆ ತೆರಳಿ ಪ್ರಚಾರ ಮಾಡುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ವೈಯಕ್ತಿಕ ಖಾತೆಗಳಲ್ಲಿ ಜಾಹೀರಾತಲ್ಲದ ಪೋಸ್ಟ್ ಹಾಕುವುದಕ್ಕೂ ಚುನಾವಣಾ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ತೋಳದಿನ್ನೆ ಗ್ರಾಮದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶಾಂತಿಯುತವಾಗಿ ಬೀದಿಸಭೆ ನಡೆಸುತ್ತಿದ್ದರು. ಅಲ್ಲಿಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ನಮ್ಮವರ ಮೇಲೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಚುನಾವಣಾ ಆಯೋಗ, ಪೊಲೀಸರು ಏನು ಕ್ರಮ ಕೈಗೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಅಧಿಕಾರಿಗಳು ಹಾಗೂ ಪೊಲೀಸರು ಆಡಳಿತ ಪಕ್ಷದ ಪರ ಕೆಲಸ ಮಾಡುವುದು ಸರಿಯಲ್ಲ ಎಂದು ಗಂಗಾಧರ್ ಹೇಳಿದರು.

share
Next Story
X