Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಸ್ಯೆಗಳನ್ನು ಬಗೆಹರಿಸುವ ಪಕ್ಷವನ್ನು...

ಸಮಸ್ಯೆಗಳನ್ನು ಬಗೆಹರಿಸುವ ಪಕ್ಷವನ್ನು ಗೆಲ್ಲಿಸಿ, ಕೋಮುವಾದಿ ಪಕ್ಷವನ್ನು ಸೋಲಿಸಿ: ರೈತ ಸಂಘದ ಪ್ರಣಾಳಿಕೆ ಬಿಡುಗಡೆ

27 April 2023 7:07 PM IST
share
ಸಮಸ್ಯೆಗಳನ್ನು ಬಗೆಹರಿಸುವ ಪಕ್ಷವನ್ನು ಗೆಲ್ಲಿಸಿ, ಕೋಮುವಾದಿ ಪಕ್ಷವನ್ನು ಸೋಲಿಸಿ: ರೈತ ಸಂಘದ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು, ಎ.27: ದೇಶದಲ್ಲಿ ಕೃಷಿ ವಲಯ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದು, ರೈತರು ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ಪಕ್ಷವನ್ನು ರೈತರು ಈ ಚುನಾವಣೆಯಲ್ಲಿ ಗೆಲ್ಲಿಸಿ, ಕೋಮುವಾದಿ ಪಕ್ಷವನ್ನು ಸೋಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ವೀರಸಂಗಯ್ಯ ತಿಳಸಿದ್ದಾರೆ. 

ಗುರುವಾರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರೈತಕುಲಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿಯನ್ನು ವಾಪಾಸ್ಸು ಪಡೆದು, ಉಳುವವನೇ ಭೂ ಒಡೆಯನಾಗಿ ಉಳಿಯುವ ಸುಧಾರಣೆಯನ್ನು ರೂಪಿಸಬೇಕು ಎಂದರು. 

ಕಾರ್ಪೊರೇಟ್ ಧಣಿಗಳ ಪರವಾಗಿ ನಮ್ಮ ಎಪಿಎಂಸಿ ವ್ಯವಸ್ಥೆಗೆ ತಿದ್ದುಪಡಿಯನ್ನು ತಂದಿದ್ದಾರೆ. ಇದನ್ನು ರದ್ದುಪಡಿಸಿ ರೈತಸ್ನೇಹಿ  ಮಾರುಕಟ್ಟೆ ಸುಧಾರಣೆಗಳನ್ನು ಜಾರಿಗೆ ತರಬೇಕು. ಹಾಗೆಯೇ ರೈತಾಪಿ ವಿರೋಧಿ ಗೋ ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು. 

ಕೇಂದ್ರ ಸರಕಾರವು ತಂದಿರುವ ವಿದ್ಯುತ್ ತಿದ್ದುಪಡಿ ಮಸೂದೆ 2022 ಅನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿಗೆ ತರಬಾರದು. ಕೃಷಿ ಪಂಪ್‍ಸೆಟ್‍ಗಳೀಗೆ ಹಗಲು 10 ಗಂಟೆ 3 ಫೇಸ್ ಗುಣಾತ್ಮಕ ವಿದ್ಯುತ್‍ಚ್ಛಕ್ತಿಯನ್ನು ಸರಬರಾಜು ಮಾಡಬೇಕು. ಜಮೀನು ಮತ್ತು ತೋಟಗಳ ವಾಸದ ಮನೆಗಳಿಗೂ ನಿರಂತರ ಜ್ಯೋತಿಯನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು. ಇದೇ ವೇಳೆ ರೈತರ ಹ್ಕೋತ್ತಾಯಗಳನ್ನು ಒಳಗೊಂಡ ರೈತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಸೇರಿ ಮತ್ತಿತರರು ಉಪಸ್ಥಿತರಿದ್ದರು.

share
Next Story
X