ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್‍ಕುಮಾರ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ಆದೇಶ

ಬೆಂಗಳೂರು, ಎ.27: ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಚ್. ಅನಿಲ್‍ಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ತೆರನಾದ ಮಾನಹಾನಿ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಾಧ್ಯಮ ಸಂಸ್ಥೆಗಳ ವಿರುದ್ಧ ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸಿದೆ.
ಅನಿಲ್‍ಕುಮಾರ್ ಅವರು ದಾಖಲಿಸಿರುವ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಪೀಠ, ಈ ಆದೇಶ ಮಾಡಿದೆ.
ಮಾಧ್ಯಮ ಸಂಸ್ಥೆಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ. ವಿಚಾರಣೆಯನ್ನು ಮುಂದೂಡಲಾಗಿದೆ.
Next Story





