Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಬಳಿಗೆ ಬಂದು ಮಂತ್ರಿ ಪದವಿ ಕೇಳಿದ್ದ...

ನಮ್ಮ ಬಳಿಗೆ ಬಂದು ಮಂತ್ರಿ ಪದವಿ ಕೇಳಿದ್ದ ಯಡಿಯೂರಪ್ಪ, ಶೆಟ್ಟರ್ ಮುಗಿಸಲು ಹೊರಟಿರುವುದು ಹಾಸ್ಯಾಸ್ಪದ: ಕುಮಾರಸ್ವಾಮಿ

''ಬುಲ್ಡೋಜರ್ ಯೋಗಿಯಿಂದ ರಾಜ್ಯದ ಜನರಿಗೆ ಏನು ಉಪಯೋಜನ?''

27 April 2023 8:32 PM IST
share
ನಮ್ಮ ಬಳಿಗೆ ಬಂದು ಮಂತ್ರಿ ಪದವಿ ಕೇಳಿದ್ದ ಯಡಿಯೂರಪ್ಪ, ಶೆಟ್ಟರ್ ಮುಗಿಸಲು ಹೊರಟಿರುವುದು ಹಾಸ್ಯಾಸ್ಪದ: ಕುಮಾರಸ್ವಾಮಿ
''ಬುಲ್ಡೋಜರ್ ಯೋಗಿಯಿಂದ ರಾಜ್ಯದ ಜನರಿಗೆ ಏನು ಉಪಯೋಜನ?''

ತುಮಕೂರು: ಜಗದೀಶ್ ಶೆಟ್ಟರ್ ಮುಗಿಸಲು ಯಡಿಯೂರಪ್ಪ ಹೊರಟಿರುವುದು ಹಾಸ್ಯಾಸ್ಪದ, 2005-06 ರಲ್ಲಿ ಇದೇ ಯಡಿಯೂರಪ್ಪ ನಮ್ಮ ಬಳಿಗೆ ಬಂದು ಮಂತ್ರಿ ಪದವಿ ಕೇಳಿದ್ದು ಸುಳ್ಳಾ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ತುಮಕೂರಿನಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ಷಫಿ ಅಹಮದ್ ಮತ್ತು ಬೆಂಬಲಿಗರು ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್, ಬಿಜೆಪಿಯವರು ಹಿಂದುಳಿದವರ ಮುಗ್ದತೆಯನ್ನು ದುರುಪಯೋಗ ಮಾಡಿಕೊಂಡು ಮತ ಕೇಳುತ್ತಿದ್ದಾರೆ, ಇವರ ಬಗ್ಗೆ ಎಚ್ಚರ ವಹಿಸಿ ಎಂದರು.

ಮೂರು ದಿನಕ್ಕೆ ಒಂದು ಮನೆ ಕಟ್ಟುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಭಾಷಣ ಮಾಡುತ್ತಾರೆ, ಅದು ಎಲ್ಲಿ ಕಟ್ಟಿದ್ದಾರೆ ತೋರಿಸಲಿ ಎಂದು ಸವಾಲು ಹಾಕಿದ ಅವರು,ರಾಜ್ಯದ ಕಲ್ಯಾಣಕ್ಕಾಗಿ ಪಂಚರತ್ನ ಯೋಜನೆ ಹಾಕಿಕೊಂಡಿದ್ದೇನೆ, ನನ್ನ ಕೈ ಬಲಪಡಿಸಿ, ನಾನು ರಾಜ್ಯದ ಅಭಿವೃದ್ಧಿ ಮಾಡಿ ತೋರಿಸುವೆ ಎಂದರು.

ರಾಜ್ಯಕ್ಕೆ ಯೋಗಿ, ಮೋದಿ, ನಡ್ಡಾ ಸೇರಿ ಹಲವರು ಬಂದು ರೋಡ್ ಶೋ ಮಾಡುತ್ತಿದ್ದಾರೆ, ಮಂಡ್ಯಕ್ಕೂ ಮೋದಿಗೂ ಏನು ಸಂಬಂಧ, ಬುಲ್ಡೋಜರ್ ಯೋಗಿಯಿಂದ ರಾಜ್ಯದ ಜನರಿಗೆ ಏನು ಉಪಯೋಜನ ಎಂದು ಪ್ರಶ್ನಿಸಿದರು.

ಮೀಸಲಾತಿ ಹೆಸರಲ್ಲಿ ಬಿಜೆಪಿ ರಾಜ್ಯದ ಜನರನ್ನು ಮೋಸ ಮಾಡಲಾಗುತ್ತಿದೆ, ರಾಷ್ಟ್ರೀಯ ಪಕ್ಷಗಳು ಜನರನ್ನು ವಂಚಿಸುತ್ತಿವೆ, ಈ ಬಗ್ಗೆ ಜನರು ಎಚ್ಚರ ವಹಿಸಬೇಕು.ಜೆಡಿಎಸ್ ನೂರಾ ಇಪ್ಪತ್ತು ಸೀಟು ಗಳಿಸುವ ವಿಶ್ವಾಸ ಇದೆ, ಜನರು, ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗುವುದು ಬೇಡ, ತುಮಕೂರು ಜಿಲ್ಲೆಯಲ್ಲಿ ಹನ್ನೊಂದು ಸ್ಥಾನ ಗೆಲ್ಲಲಿದ್ದೇವೆ, ಇದರಲ್ಲಿ ಯಾವುದೇ ಸಂಶಯ ಇಲ್ಲ ಎಂದರು.

ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರ ದಲ್ಲಿ ಮುಳುಗಿವೆ, ಜೆಡಿಎಸ್ ಯಾವುದೇ ಭ್ರಷ್ಟಾಚಾರ ಮಾಡಿಲ್ಲ, ನಾನು ರೈತರ ಸಾಲ ಮನ್ನಾ ಮಾಡಿದೆ, ಅಲ್ಲಿ ನಾನು ಯಾವುದೇ ಪರ್ಸೆಂಟೇಜ್ ಪಡೆಯಲಿಲ್ಲ, ರಾಜ್ಯದ ಅಭಿವೃದ್ಧಿ ಗಾಗಿ ಜೆಡಿಎಸ್ ಗೆ ಮತ ನೀಡಿ, ನಮಗೆ ನಿಮ್ಮ ಆಶೀರ್ವಾದ ಇರಲಿ ಎಂದರು.

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವವರಿದ್ದಾರೆ, ದೇವೇಗೌಡರು ಎಂದು ಜಾತಿ ರಾಜಕಾರಣ ಮಾಡಲಿಲ್ಲ, ಜೆಡಿಎಸ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದರು.

share
Next Story
X