Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯ ಮೀನುಗಾರರು ಎದುರಿಸುತ್ತಿರುವ...

ಕರಾವಳಿಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಾನು ಅಧ್ಯಯನ ನಡೆಸಿದ್ದೇನೆ: ರಾಹುಲ್‌ ಗಾಂಧಿ

► ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ►10 ಲಕ್ಷ ರೂ.ವಿಮೆ, ಡೀಸೆಲ್‌ಗೆ 25 ರೂ. ಸಬ್ಸಿಡಿ ಕೊಡುಗೆಯ ಭರವಸೆ

27 April 2023 9:02 PM IST
share
ಕರಾವಳಿಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಾನು ಅಧ್ಯಯನ ನಡೆಸಿದ್ದೇನೆ: ರಾಹುಲ್‌ ಗಾಂಧಿ
► ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ►10 ಲಕ್ಷ ರೂ.ವಿಮೆ, ಡೀಸೆಲ್‌ಗೆ 25 ರೂ. ಸಬ್ಸಿಡಿ ಕೊಡುಗೆಯ ಭರವಸೆ

ಉಚ್ಚಿಲ, ಎ.27: ಕರಾವಳಿಯ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ತಾನು ಅಧ್ಯಯನ ನಡೆಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಪ್ರತಿ ಲೀ. ಡೀಸೆಲ್‌ಗೆ 25 ರೂ. ಸಬ್ಸಿಡಿಯೊಂದಿಗೆ ಪ್ರತಿದಿನ 500 ಲೀ.ಡೀಸೆಲ್, ಸಮಸ್ತ ಮೀನುಗಾರರಿಗೆ 10 ಲಕ್ಷ ರೂ.ಗಳ ವಿಮಾ ಸೌಲಭ್ಯ ಸೇರಿದಂತೆ ನಾಲ್ಕು ಕೊಡುಗೆಗಳನ್ನು ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಿಲ್ಲೆಯ ಮೀನುಗಾರರಿಗೆ ಭರವಸೆಯನ್ನು ನೀಡಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಪು ತಾಲೂಕು ಉಚ್ಚಿಲದ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿರುವ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲೆಯ ಮೀನುಗಾರ ರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನೆರೆದ ಮೀನುಗಾರ ರನ್ನುದ್ದೇಶಿಸಿ ಮಾತನಾಡುತ್ತಾ ಅವರು ಈ ಆಶ್ವಾಸನೆ ನೀಡಿದರು.

ಮೀನುಗಾರರಿಗೆ 10 ಲಕ್ಷ ರೂ. ವಿಮಾ ಸೌಲಭ್ಯದೊಂದಿಗೆ ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ಬಡ್ಡಿ ರಹಿತ ಸಾಲವನ್ನು ನೀಡುವುದಾಗಿಯೂ ಅವರು ತಿಳಿಸಿದರು.

ಮೀನುಗಾರರಿಗೂ ಕೃಷಿಕರ ಸೌಲಭ್ಯ: ನಮ್ಮ ರೈತರು ಹೊಲಗಳಲ್ಲಿ ಬೆವರು ಸುರಿಸಿ ಕೃಷಿ ಮಾಡಿದರೆ, ಮೀನುಗಾರರು ಸಮುದ್ರದಲ್ಲಿ ಕೃಷಿ ಮಾಡುತ್ತಾರೆ.  ಹೀಗಾಗಿ ರೈತರಿಗೆ ನೀಡುವ ಪ್ರೋತ್ಸಾಹ ಹಾಗೂ ರಕ್ಷಣೆಯನ್ನು ಮೀನುಗಾರರಿಗೂ ವಿಸ್ತರಿಸುವುದಕ್ಕೆ ತಾನು ಬದ್ಧನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಖಂಡಿತ ಇದನ್ನು ಈಡೇರಿಸುತ್ತದೆ ಎಂದು ನಾನು ನಿಮಗೆ ಆಶ್ವಾಸನೆ ನೀಡುತ್ತೇನೆ ಎಂದರು.

ಮೀನುಗಾರರ ಬದುಕಿನ ಬವಣೆಯನ್ನು ಹಾಗೂ ಪ್ರತಿದಿನ ಅವರು ಎದುರಿಸುವ ಕಷ್ಟಗಳನ್ನು ಅರಿಯಲು ಅವರೊಂದಿಗೆ ಒಂದು ದಿನ ಕಳೆಯುವ ಅಗತ್ಯವಿದೆ. ಇದನ್ನು ನಾನು ಮೀನುಗಾರರೊಂದಿಗೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿದಾಗ ಪಡೆದಿದ್ದೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಂಡಿತವಾಗಿ ಕ್ರಿಯಾಶೀಲವಾದ ಹಾಗೂ ಪರಿಣಾಮಕಾರಿಯಾದ ಮೀನುಗಾರಿಕಾ ಸಚಿವಾಲಯವನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದರು.

ನಾನು ಯಾವತ್ತೂ ನಿಮ್ಮ ಭಾವನೆಗಳು ಹಾಗೂ ಬದುಕಿನೊಂದಿಗೆ ಆಟವಾಗಿ ಸುಳ್ಳು ಆಶ್ವಾಸನೆಗಳನ್ನು ನೀಡಲಾರೆ. ಮೀನುಗಾರರ ಬದುಕು, ಬವಣೆಯ ಕುರಿತು ಸಾಕಷ್ಟು ಸಂಶೋಧನೆ ನಡೆಸಿದ ನಂತರವಷ್ಟೇ ನಾನೀ  ಬದ್ಧತೆಗಳನ್ನು ನಿಮಗೆ ನೀಡುತ್ತಿದ್ದೇನೆ. ಸುಳ್ಳು ಭರವಸೆಗಳನ್ನು ನೀಡಿದರೆ ನಾನೊಬ್ಬ ಬೇಜವಾಬ್ದಾರಿ ಮನುಷ್ಯನೆನಿಸಿಕೊಳ್ಳುತ್ತೇನೆ ಎಂದು ಅವರು ಮೀನುಗಾರ ಮಹಿಳೆಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ತಿಳಿಸಿದರು.

ಈಗ 50,000 ರೂ.ಸಿಗುತ್ತಿರುವ ಮೀನುಗಾರ ಮಹಿಳೆಯರ ಸಾಲವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸಬೇಕೆಂದು ಶಿರೂರಿನ ಮೀನುಗಾರ ಮಹಿಳೆ ಸಾವಿತ್ರ ನಾರಾಯಣ ಅಳ್ವೆಗದ್ದೆ ಅವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತಿದ್ದರು. ನಮ್ಮ ಸರಕಾರ ಬಂದರೆ ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ಬಡ್ಡಿರಹಿತ ಸಾಲ ನೀಡುವುದಾಗಿ ಈಗಾಗಲೇ ನಾನು ಭರವಸೆ ನೀಡಿದ್ದೇನೆ. ಮುಂದೆ ಪರಿಸ್ಥಿತಿ ಅವಲೋಕಿಸಿ ನಿಮ್ಮ ಬೇಡಿಕೆಯನ್ನು ಈಡೇರಿಸುವ ಪ್ರಯತ್ನವನ್ನು ಪಕ್ಷ ನಡೆಸಲಿದೆ ಎಂದರು.

ನಾನು ನೀಡುವ ಭರವಸೆ ನಮ್ಮ ಪ್ರಧಾನಿ ಭರವಸೆ ನೀಡಿದಂತೆ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷರೂ. ಹಾಕುವ ಸುಳ್ಳು ಭರವಸೆಯಲ್ಲ  ಎಂದವರು ನುಡಿದರು.

ಜಾತಿ ಜನಗಣತಿ: ಮೀನುಗಾರ ಮಕ್ಕಳಿಗೆ ಮೀಸಲಾತಿ ಹಾಗೂ ಉನ್ನತ ಶಿಕ್ಷಣಕ್ಕೆ ಅವಕಾಶ ಒದಗಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಮೀಸಲಾತಿಯ ಸಂಕೀರ್ಣತೆಯನ್ನು ಅರಿತುಕೊಳ್ಳಲು ದೇಶ ದಲ್ಲಿರುವ ಎಲ್ಲಾ ಜಾತಿಗಳ ಸಮಗ್ರ ಅಧ್ಯಯನ ನಡೆಸಬೇಕಾಗಿದೆ. ಇದಕ್ಕಾಗಿ ಜಾತಿ ಜನಗಣತಿ ನಡೆಯಬೇಕಾಗಿದೆ.

ಯುಪಿಎ ಸರಕಾರದ ಆಡಳಿತಾವಧಿಯಲ್ಲಿ ಜಾತಿ ಜಗಣತಿ ನಡೆದಿದ್ದರೂ,  ಅದರ ವರದಿಯನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಅದನ್ನು ಬಹಿರಂಗ ಪಡಿಸುವಂತೆ ತಾನು ಕೇಂದ್ರ ಸರಕಾರವನ್ನು ಒತ್ತಾಯಿಸುತ್ತಲೇ ಬಂದಿ ದ್ದೇನೆ ಎಂದರು. ಈ ವರದಿಯಂತೆ ದೇಶದ ಅಧಿಕಾರಿಗಳಲ್ಲಿ ಶೇ.7ರಷ್ಟು ಮಂದಿ ಮಾತ್ರ ಓಬಿಸಿ ವರ್ಗದವರಿದ್ದಾರೆ. ಈ ಸರಕಾರಕ್ಕೆ ದೇಶದ ಬಹುಸಂಖ್ಯಾತ ಜನರ ಕಷ್ಟಕಾರ್ಪಣ್ಯಗಳ ಅರಿವಿಲ್ಲ ಎಂದರು.

ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಖಂಡಿತ ಜಾತಿ ಜನಗಣತಿ ವರದಿಯನ್ನು ಬಹಿರಂಗ ಪಡಿಸಲಿದೆ ಹಾಗೂ ಅವೈಜ್ಞಾನಿಕವಾದ ಮೀಸಲಾತಿಯಲ್ಲಿ 50ಶೇ. ನಿರ್ಬಂಧವನ್ನು ತೆಗೆದುಹಾಕಲಿದೆ ಎಂದರು.

ಮಂಗಳೂರಿನಿಂದ ಕಾರವಾರದವರೆಗೆ ಎಲ್ಲಾ ಬಂದರುಗಳಲ್ಲಿ ಹೂಳೆತ್ತುವುದಕ್ಕೆ ಪ್ರಾಶಸ್ತ್ಯ ನೀಡಬೇಕು ಎಂಬ ಚೇತನ ಬೆಂಗ್ರೆ ಅವರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಖಂಡಿತ ನಿಮ್ಮ ಬೇಡಿಕೆಯನ್ನು ನಾನು ವೈಯಕ್ತಿಕವಾಗಿ ಈಡೇರಿಸುವಂತೆ ನೋಡಿಕೊಳ್ಳುತ್ತೇನೆ. ಇದರೊಂದಿಗೆ ಆಕೆಯ ಇನ್ನೊಂದು ಬೇಡಿಕೆಯಾದ ಕಡಲು ಅಂಬುಲೆನ್ಸ್ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಘೋಷಣೆ: ಕಾಂಗ್ರೆಸ್ ಈಗಾಗಲೇ ಘೋಷಿಸಿದ ನಾಲ್ಕು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದ ಮೊದಲ ಕ್ಯಾಬಿನೆಟ್ ಮೀಟಿಂಗ್‌ನಲ್ಲೇ ಈಡೇರಿಸಲಾಗುವುದು ಎಂದರು.

ರಾಹುಲ್ ಗಾಂಧಿಗೆ ಅಂಜಲ್ ಕೊಡುಗೆ: ಕಟಪಾಡಿಯ ಮಹಿಳೆ ಪ್ರೇಮ ಅವರು ಬೃಹತ್ ಗಾತ್ರದ ಅಂಜಲ್ ಮೀನನ್ನು ಹೊತ್ತು ತಂದು ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಉಡುಗೊರೆಯಾಗಿ ನೀಡಿದರು. ಕಾರ್ಯಕ್ರಮದ ಬಳಿಕ ಅವರು ಪಕ್ಕದ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್‌ಕುಮಾರ್ ಸೊರಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಕ್ಷೇತ್ರದ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪ್ರತಾಪ್‌ಚಂದ್ರ ಶೆಟ್ಟಿ, ಟಿ. ಎನ್. ಪ್ರತಾಪನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಎಂ.ಎ. ಗಫೂರ್, ದೇವಿಪ್ರಸಾದ್ ಶೆಟ್ಟಿ, ರಾಜಶೇಖರ ಕೋಟ್ಯಾನ್, ನವೀನ್‌ಚಂದ್ರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಭಾವನಾ, ಗೀತಾ ವಾಗ್ಲೆ, ವೆರೋನಿಕಾ ಕರ್ನೇಲಿಯೋ, ದೀಪಕ್ ಕೋಟ್ಯಾನ್, ಪ್ರಶಾಂತ ಜತ್ತನ್ನ, ಮಂಜುನಾಥ ಸೊಣೇಗಾರ್, ವಿಶ್ವಾಸ್ ಅಮೀನ್, ಸರಳಾ ಕಾಂಚನ್, ಶಿವಾಜಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

share
Next Story
X