ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕ ಶರತ್ ಬಚ್ಚೇಗೌಡ ಪತ್ನಿಯ ಕಾರಿನ ಗಾಜು ಒಡೆದ ಕಿಡಿಗೇಡಿಗಳು: ಪ್ರಕರಣ ದಾಖಲು

ಬೆಂಗಳೂರು: ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರ ಪತ್ನಿಯ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಪತಿಯ ಪರ ಪ್ರಚಾರಕ್ಕೆ ತೆರಳಿದ್ದ ವೇಳೆ ನಿಲ್ಲಿಸಿದ್ದ ಕಾರನ್ನು ಗುರಿಯಾಗಿಸಿಕೊಂಡ ಕಿಡಿಗೇಡಿಗಳು ದಾಳಿ ನಡೆಸಿ ಗ್ಲಾಸ್ ಒಡೆದಿದ್ದಾರೆನ್ನಲಾಗಿದೆ.
ಕಾಲ್ನಡಿಗೆಯ ಪ್ರಚಾರವಾದ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡರ ಪತ್ನಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರೆನ್ನಲಾಗಿದ್ದು, ಇತ್ತ ದುಷ್ಕರ್ಮಿಗಳು ಇವರ ಕಾರಿನ ಗಾಜು ಒಡೆದು ಬ್ಯಾಗು ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





