ಬೆಂಗಳೂರು: ಆನ್‍ಲೈನ್ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಈಡಿ ದಾಳಿ

ಬೆಂಗಳೂರು, ಎ.27: ಆನ್‍ಲೈನ್ ಶಿಕ್ಷಣ ಸಂಸ್ಥೆ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಪ್ರೈ.ಲಿ. ಬೆಂಗಳೂರಿನಲ್ಲಿರುವ ಎರಡು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಈಡಿ)ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಚೀನಾಕ್ಕೆ ಕಾನೂನು ಬಾಹಿರವಾಗಿ 82 ಕೋಟಿ ರೂ.ಗಳನ್ನು ರವಾನೆ ಮಾಡಿದ ಆರೋಪದ ಮೇಲೆ ಚೀನಾ ಪ್ರಜೆಗಳ ಸಂಪೂರ್ಣ ಮಾಲಕತ್ವ ಮತ್ತು ನಿಯಂತ್ರಣದಲ್ಲಿರುವ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾಕಂಪೆನಿ ಮೇಲೆ ದಾಳಿ ನಡೆಸಿ ಶೋಧ ನಡೆಸಿರುವುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ಅಡಿ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಈಡಿ ಅಧಿಕಾರಿಗಳು ತಿಳಿಸಿದ್ದಾರೆ.
Next Story