ಸುಳ್ಯ: ಎ.28ರಿಂದ ಆರಂಭಗೊಳ್ಳಬೇಕಿದ್ದ ಅಜ್ಜಾವರ ಮೇನಾಲ ಉರೂಸ್ ಮುಂದೂಡಿಕೆ
ಸುಳ್ಯ, ಎ.28: ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಎ.28ರಿಂದ ಆರಂಭಗೊಂಡು ಮೇ 2ರವರೆಗೆ ಉರೂಸ್ ಆಯೋಜನೆ ಬಗ್ಗೆ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯ ಮೊದಲೇ ತೀರ್ಮಾನಿಸಲಾಗಿತ್ತು. ಆದರೆ ಇದೀಗ ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಉರೂಸ್ ಸಭಾ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸುತ್ತಿದ್ದಾರೆ. ಆದ್ದರಿಂದ ಉರೂಸ್ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸದ್ಯ ಮುಂದೂಡಲಾಗಿದೆ ಎಂದು ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
Next Story