ಬೆಂಗಳೂರಿನಲ್ಲಿ ಮೋದಿ ರೋಡ್ ಶೋ: 5ಕಿ.ಮೀ ವ್ಯಾಪ್ತಿಯ ಮನೆ, ಅಂಗಡಿ ಮಾಲಕರಿಗೆ ನೋಟಿಸ್ ನೀಡಿದ ಪೊಲೀಸರು

ಬೆಂಗಳೂರು, ಎ. 27: ಎ.29 ಮತ್ತು 30ರಂದು (ಶನಿವಾರ ಮತ್ತು ರವಿವಾರ) ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿಯವರು ಎ.29ರ ಸಂಜೆ ಬೆಂಗಳೂರಿನಲ್ಲಿ ಮಾಗಡಿ ರಸ್ತೆಯ ನೈಸ್ ರೋಡ್‍ನಿಂದ ಸುಮ್ಮನಹಳ್ಳಿಯ ವರೆಗೆ ಸುಮಾರು 4.5 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ರೋಡ್ ಶೋ ನಡೆಯುವ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಪ್ರತಿ ಮನೆಗಳಿಗೆ ಹಾಗೂ ಅಂಗಡಿ ಮಾಲಕರಿಗೆ ನೋಟಿಸ್ ನೀಡಿದ್ದಾರೆ.
ರಸ್ತೆ ಅಕ್ಕ ಪಕ್ಕ ಇರುವ ಕಂಪೆನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಹೆಸರು, ವಿಳಾಸ, ಮೊಬೈಲ್ ನಂಬರ್ ಒದಗಿಸುವಂತೆ ಸೂಚಿಸಿದ್ದಾರೆ. ಹಾಗೇ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಭದ್ರತಾ ಸಿಬ್ಬಂದಿ ಎಚ್ಚರಿಕೆಯಿಂದಿರಬೇಕು. ಕೆಲಸದ ವೇಳೆ ಏನಾದರು ಅನುಮಾನಸ್ಪದವಾಗಿ ಕಂಡರೆ ತಕ್ಷಣ ಮಾಹಿತಿ ನೀಡಬೇಕು ಎಂಬ ಸಂದೇಶ ನೀಡಿದ್ದಾರೆ.
ಇನ್ನು ಹೊಸದಾಗಿ ಕೆಲಸಕ್ಕೆ ಸೇರಿಸಿಕೊಂಡಿದ್ದಲ್ಲಿ ಅವರ ಹೆಸರು, ವಿಳಾಸ, ಮೊಬೈಲ್ ನಂಬರ್ ಒದಗಿಸುವಂತೆ ಸೂಚಿಸಿದ್ದಾರೆ.