Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಂದುತ್ವವಾದಿಗಳೆಂದು ಹೇಳುವವರು...

ಹಿಂದುತ್ವವಾದಿಗಳೆಂದು ಹೇಳುವವರು ಸಿದ್ಧರಾಮಯ್ಯರ ಕ್ಷೇತ್ರದಲ್ಲಿ ಸ್ಪರ್ಧಿಸಲಿ: ಪ್ರತಾಪ್‌ಸಿಂಹ ನಾಯಕ್

28 April 2023 6:29 PM IST
share
ಹಿಂದುತ್ವವಾದಿಗಳೆಂದು ಹೇಳುವವರು ಸಿದ್ಧರಾಮಯ್ಯರ ಕ್ಷೇತ್ರದಲ್ಲಿ ಸ್ಪರ್ಧಿಸಲಿ: ಪ್ರತಾಪ್‌ಸಿಂಹ ನಾಯಕ್

ಉಡುಪಿ: ಹಿಂದುತ್ವವಾದಿಗಳೆಂದು ಹೇಳುವ ಅರುಣ್ ಪುತ್ತಿಲ, ಪ್ರಮೋದ್ ಮುತಾಲಿಕ್ ಎಲ್ಲಿ ಹೋಗಿ ಸ್ಪರ್ಧೆ ಮಾಡಬೇಕೋ ಅಲ್ಲಿ ಮಾಡುವುದಿಲ್ಲ. ಹಿಂದುತ್ವದ ಪರವಾಗಿ ಕೆಲಸ ಮಾಡುವವರ ವಿರುದ್ಧವೇ ಇವರು ಸ್ಪರ್ಧಿಸುತ್ತಿದ್ದಾರೆ. ಇದರ ಹಿಂದೆ ಅಹಂಕಾರ, ಸ್ವಾರ್ಥ ಇದೆ. ಇವರಿಗೆ ಸಿದ್ಧ ರಾಮಯ್ಯ ಅವರ ಕ್ಷೇತ್ರದಲ್ಲಿ ಹೋಗಿ ಸ್ಪರ್ಧಿಸಬಹುದಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್ ಪ್ರಶ್ನಿಸಿದ್ದಾರೆ.

ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅರುಣ್ ಪುತ್ತಿಲ ಬಿಜೆಪಿ ಸದಸ್ಯರೇ ಅಲ್ಲ.  ಬಿಜೆಪಿಯ ಒಳಗೆ ಇದ್ದು ಅವರು ಯಾವುದೇ ಕೆಲಸ ಮಾಡಿಲ್ಲ. ಪಕ್ಷದ ಚೌಕಟ್ಟಿ ನೊಳಗೆ ಕೆಲಸ ಮಾಡಿ ಹಿಂದುತ್ವದ ಶಕ್ತಿಯನ್ನು ಗಟ್ಟಿಗೊಳಿಸಬೇಕಾಗಿರು ವುದು ನಿಜವಾದ ಹಿಂದುತ್ವ ಕಾರ್ಯ ಕರ್ತನ ಕರ್ತವ್ಯ. ಅದು ಬಿಟ್ಟು ಹೊರಗೆ ಸ್ಪರ್ಧಿಸಿದಾಗ ಅವರು ನೈತಿಕತೆ ಕಳೆದುಕೊಳ್ಳುತ್ತಾರೆ ಎಂದರು.

ಪಕ್ಷ ಗೆಲ್ಲಲು ಸಾಧ್ಯ ಇಲ್ಲದ ಸ್ಥಿತಿಯಲ್ಲಿ ಇರುವಾಗ ಹೊರಗಡೆ ಹೋಗಿ ಸ್ಪರ್ಧಿಸುವ ಮೂಲಕ ಇವರು ಹಿಂದುತ್ವಕ್ಕೆ ಸಹಾಯ ಮಾಡುತ್ತಿದ್ದಾರೆಯೇ ಅಥವಾ ಹಿಂದುತ್ವ ವಿರೋಧಿಗಳಿಗೆ ಸಹಾಯ ಮಾಡುತ್ತಿದ್ದಾರೆಯೇ ಎಂಬುದನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಪುತ್ತೂರು ಕ್ಷೇತ್ರದಲ್ಲಿ ನೇರ ಸ್ಪರ್ಧೆ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ. ಎಲ್ಲ ವಿರೋಧಗಳ ಮಧ್ಯೆ ಕೂಡ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿರುವುದು ಈ ದೇಶದ ಜನತೆಯ ಆದೇಶಕ್ಕೆ, ದೇಶದ ಗೌರವಕ್ಕೆ, ಸಂವಿಧಾನಕ್ಕೆ ಮಾಡಿರುವ ಅಪಮಾನ. ಇದು ಕಾಂಗ್ರೆಸಿನವರು ಹತಾಶೆ ಹಾಗೂ ಬೌದ್ಧಿಕ ದಿವಾಳಿತನದ ಹೇಳಿಕೆಯಾಗಿದೆಂದು ಅವರು ಆರೋಪಿಸಿದರು.

ಸೋಲುವ ಭೀತಿಯಲ್ಲಿ ಕಾಂಗ್ರೆಸ್ ಉಚಿತ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇವರಿಗೆ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ. ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ಎದುರಿಸಿದರೆ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದೆ. ಕಾಂಗ್ರೆಸ್ ತುಷ್ಠೀಕರಣದ ರಾಜಕಾರಣ ಮಾಡಿದರೆ ಬಿಜೆಪಿ ಸಂತುಷ್ಠಿಯ ರಾಜಕಾರಣ ಮಾಡುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ 13 ಸ್ಥಾನಗಳನ್ನು ಕೂಡ ಬಿಜೆಪಿ ಗೆಲ್ಲಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಘವೇಂದ್ರ ಕಿಣಿ, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು.

share
Next Story
X