ಅಂಚೆ ಮತದಾನ ಮಾಡುವ ಅಧಿಕಾರಿ/ಸಿಬ್ಬಂದಿಗೆ ವೇತನ ಸಹಿತ ರಜೆ

ಬೆಂಗಳೂರು, ಎ. 28: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ಇಲಾಖೆಗಳೆಂದು ಅಧಿಸೂಚಿಸಿರುವಂತೆ ಕೇಂದ್ರ ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆ ಎಂದು ಗುರುತಿಸಲಾದ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗೆ ಅಂಚೆ ಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕ ಮಾದರಿಯಾಗಿ ಮೇ 2ರಿಂದ 4ರ ವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ತೆರೆಯಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಅಧಿಕಾರಿ/ಸಿಬ್ಬಂದಿಗಳು ಮತದಾನ ಮಾಡಲು ಅನುವಾಗುವಂತೆ ನಿಗದಿಪಡಿಸಿದ ದಿನಾಂಕಗಳಂದು ಮತದಾನ ಮಾಡಲು ತೆರಳಿದ ದಿನದಂದು ವೇತನ ಸಹಿತ ರಜೆ ನೀಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Next Story





