Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮ್ಯಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ...

ಮ್ಯಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ಮತದಾನ ಜಾಗೃತಿ

28 April 2023 7:23 PM IST
share
ಮ್ಯಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ಮತದಾನ ಜಾಗೃತಿ
ಉಡುಪಿ: ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿ ಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗು ತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿರುವ ಮ್ಯಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್‌ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗಿದೆ. ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಗಳ ವತಿಯಿಂದ ಬುಧವಾರ, ಸಾಲಿಗ್ರಾಮದ ಸೀತಾ ನದಿಯ ಹಿನ್ನೀರಿನ ನಡುವಿನಲ್ಲಿರುವ ದಟ್ಟ ಕಾಂಡ್ಲಾವನದ ನಡುವೆ ಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಕೂರ್ಮರಾವ್ ಎಂ., ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಪ್ರೋಬೇಷನರಿ ಐಎಎಸ್ ಅಧಿಕಾರಿ ಯತೀಶ್ ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ನೈತಿಕ ಮತದಾನ ಪ್ರತಿಜ್ಞೆ ಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತಾ ಉಪಕರಣಗಳನ್ನು ಧರಿಸಿ ಕಯಾಕಿಂಗ್ ಪ್ರಾರಂಭಿಸಿದರು. ಸುಮಾರು 30 ನಿಮಿಷಗಳ ಕಾಲ ಕಯಾಕಿಂಗ್ ನಡೆಸಿದ ಬಳಿಕ ಮ್ಯಾಂಗ್ರೋವ್ ಕಾಡುಗಳ ಮಧ್ಯೆ ಇರುವ ಪ್ರದೇಶದಲ್ಲಿ ಸುಮಾರು ೪೦ಕ್ಕೂ ಅಧಿಕ ಕಯಾಕ್ ದೋಣಿಗಳನ್ನು ಬೇರೆ ಬೇರೆ ವಿನ್ಯಾಸಗಳಲ್ಲಿ ಇರಿಸುವ ಮೂಲಕ ಮತದಾನ ದಿನವಾದ ಮೇ 10ನೇ ದಿನಾಂಕದ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನದಿಯ ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಸಂದೇಶ ಮೂಡಿಸಲಾಯಿತು. ಕಯಾಕಿಂಗ್‌ನ ಆರಂಭದ ಸ್ಥಳದಿಂದ ನದಿ ಮಧ್ಯದ ಕಾರ್ಯಕ್ರಮ ನಡೆಯವ ಸ್ಥಳದವರೆಗೂ ನದಿಯಲ್ಲಿ ಮತದಾನ ಜಾಗೃತಿ ಸಾರುವ ಯಕ್ಷಗಾನ ಮುಕುಟ ಮಾದರಿಯ ಆಕೃತಿಗಳು ಗಮನ ಸೆಳೆದವು. ಇದೇ ಸಂದರ್ಭದಲ್ಲಿ ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕೆರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ, ಮತದಾನ ದಿನಾಂಕವನ್ನು ಒಳಗೊಂಡ ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಕೂಡಾ ಜಾಗೃತಿ ಮೂಡಿಸಲಾಯಿತು. ಈ ವಿಶಿಷ್ಠ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್‌ನಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬ್ಬಂದಿಗಳು ಅಗತ್ಯ ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು. "ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ನದಿ ಹಿನ್ನೀರಿನ ಮ್ಯಾಂಗ್ರೋವ್ ವನದ ನಡುವೆ ಕಯಾಕ್‌ಗಳ ಮೂಲಕ ವಿಶಿಷ್ಠ ಮತ್ತು ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರವಾಸಿ ತಾಣಗಳು ಹಾಗೂ ಸಾಹಸ ಚಟುವಟಿಕೆಗಳು ನಡೆಯುವ ಸ್ಥಳಗಳು ಯುವಜನತೆಯನ್ನು ಹೆಚ್ಚು ಆರ್ಕಷಿಸಲಿದ್ದು, ಇಲ್ಲಿ ನಡೆಸುವ ಮತದಾನ ಜಾಗೃತಿ ಕಾರ್ಯಕ್ರಮ ಗಳ ಮೂಲಕ ಯುವಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಸೆಳೆಯಲು ಸಹಕಾರಿಯಾಗಲಿದೆ". -ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ.
share
Next Story
X