Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಡಿಲಿನ ಬಗ್ಗೆ ಮುನ್ಸೂಚನೆ ನೀಡಲಿದೆ...

ಸಿಡಿಲಿನ ಬಗ್ಗೆ ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆ್ಯಪ್

28 April 2023 7:31 PM IST
share
ಸಿಡಿಲಿನ ಬಗ್ಗೆ ಮುನ್ಸೂಚನೆ ನೀಡಲಿದೆ ‘ಸಿಡಿಲು’ ಆ್ಯಪ್
ಉಡುಪಿ: ಪಶ್ಚಿಮ ಕರಾವಳಿಯಲ್ಲಿ ಮಾನ್ಸೂನ್ ಪ್ರಾರಂಭಕ್ಕೆ ಮುನ್ನ ಸಾಮಾನ್ಯವಾಗಿ ಬರುವ ಮುಂಗಾರು ಪೂರ್ವ ಮಳೆಯ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುವ ಸಿಡಿಲಿನಿಂದ ರಕ್ಷಣೆ ಪಡೆಯಲು ಅತ್ಯಂತ ಸರಳ ಮಾರ್ಗಗಳನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಮೊಬೈಲ್ ಆ್ಯಪ್ ‘ಸಿಡಿಲು’: ಕರಾವಳಿ, ಮಲೆನಾಡು ಭಾಗಗಳಲ್ಲಿ ಗುಡುಗಿನೊಂದಿಗೆ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಸಿಡಿಲಿನ ಬಗ್ಗೆ ಇದೀಗ ಮೊಬೈಲ್‌ನ ‘ಸಿಡಿಲು’ ಆ್ಯಪ್ ಮೂಲಕ ಮುಂಚಿತವಾಗಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದರೆ ಕಿಟಕಿಯಿಂದ ಸಾಕಷ್ಟು ದೂರ ವಿರಬೇಕು. ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಲೇಬಾರದು. ಗೃಹಪಯೋಗಿ ಉಪಕರಣಗಳ ಪ್ಲಗ್‌ ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ನೀರಿನ ಸಂಪರ್ಕದಿಂದ ದೂರವಿರಬೇಕು. ಸ್ನಾನ ಮತ್ತು ಪಾತ್ರೆ ಹಾಗೂ ನೀರಿನೊಂದಿಗಿನ ಇತರ ಕೆಲಸ ವನ್ನು ಮಾಡಬಾರದು. ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು. ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
share
Next Story
X