Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಸಿಗಾಳಿಯ ಅಪಾಯ: ರಕ್ಷಣೆಯ ವಿಧಾನಗಳು

ಬಿಸಿಗಾಳಿಯ ಅಪಾಯ: ರಕ್ಷಣೆಯ ವಿಧಾನಗಳು

28 April 2023 7:36 PM IST
share
ಬಿಸಿಗಾಳಿಯ ಅಪಾಯ: ರಕ್ಷಣೆಯ ವಿಧಾನಗಳು

ಉಡುಪಿ: ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದೆ. ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಬಿಸಿಗಾಳಿಯಿದ ಉಂಟಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಲಹೆ - ಸೂಚನೆಗಳನ್ನು ಪಾಲಿಸುವುದು ಅಗತ್ಯ ಎಂದು ತಿಳಿಸಿದೆ. *ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯವಾದಷ್ಟು ಅಪರಾಹ್ನ 12:00ರಿಂದ 3:00 ಗಂಟೆಯವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ಕಡಿಮೆ ಮಾಡಬೇಕು. ಬಾಯಾರಿಕೆಯಾಗದಿದ್ದರೂ ಆಗಾಗ ಸಾಕಷ್ಟು ನೀರನ್ನು ಸೇವಿಸು ತ್ತಿರಬೇಕು. *ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ/ ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು. *ಉಷ್ಣತೆ ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. *ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಕುಡಿಯಬಾರದು. ಈ ಸಂದರ್ಭದಲ್ಲಿ ಬಿಸಿ ಆಹಾರವನ್ನು ಸೇವಿಸಬಾರದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕುಪ್ರಾಣಿಗಳನ್ನು ಬಿಡಬಾರದು. *ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯ ಮತ್ತು ಓಆರ್‌ಎಸ್ ಅನ್ನು ಬಳಸಬೇಕು. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. *ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್‌ಶೆಡ್‌ಗಳನ್ನು ಬಳಸಬೇಕು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ/ ಟೋಪಿ ಅಥವಾ ಕ್ಯಾಪ್/ ಹೆಡ್‌ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್‌ಫ್ಯಾನ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಮೌಖಿಕ ರೀಹೈಡ್ರೇಶನ್ ಪೌಡರ್ ಒಳಗೊಂಡಿರುವ ಬಿಸಿಗಾಳಿ ತಡೆಗಟ್ಟುವ ಕಿಟ್ ತೆಗೆದುಕೊಂಡು ಹೋಗಲು ಜನರನ್ನು ಪ್ರೇರೇಪಿಸಬೇಕು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬಿಸಿಗಾಳಿಯಿಂದ ಅಸ್ವಸ್ಥಗೊಂಡರೆ.... ಬಿಸಿಗಾಳಿಯಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ, ಬಳಲಿಕೆ ಮತ್ತು ಸನ್‌ಸ್ಟ್ರೋಕ್‌ನಂತಹ ಆರೋಗ್ಯ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಯಿದೆ. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ವ್ಯಕ್ತಿಯು ಪ್ರಜ್ಞೆ ಹೊಂದಿದ್ದರೆ, ನೀರು ಅಥವಾ ಪುನರ್ಜಲೀಕರಣ ಪಾನೀಯ ನೀಡಿ, ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡರೆ, ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ನೀಡಬೇಕು. ಮದ್ಯಪಾನ, ಕಾಫಿ ಹಾಗೂ ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಬಿಸಿಗಾಳಿಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು.

share
Next Story
X