ಬಿಎಂಟಿಸಿಯಿಂದ ಮತದಾನ ಜಾಗೃತಿ ಅಭಿಯಾನ
ಬೆಂಗಳೂರು, ಎ. 28: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ‘ಮತದಾನದ ಜಾಗೃತಿ’ ಮೂಡಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಕೇಂದ್ರ ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ಬಿಬಿಎಂಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಎಂಟಿಸಿ ಸಾಂಸ್ಕೃತಿಕ ಕಲಾ ಕುಟೀರದ ಕಲಾವಿದರು ಮತ್ತು ಕೆಎಸ್ಸಾರ್ಟಿಸಿ ಸಿಬ್ಬಂದಿ ‘ಮತದಾನ ಸಂಕಲ್ಪ ಬೀದಿ ನಾಟಕವನ್ನು ಪ್ರದರ್ಶಿಸಿದರು.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಅವರು ಮತದಾನ ಜಾಗೃತಿಗಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ತಪ್ಪದೆ ಮತದಾನ ಮಾಡಲು ಪ್ರತಿಯೊಬ್ಬರು ಪ್ರತಿಜ್ಞೆ ಮಾಡಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯಪುರ, ಬಿಎಂಟಿಸಿ ನಿರ್ದೇಶಕ ಎ.ವಿ. ಸೂರ್ಯಸೇನ್, ಬಿಬಿಎಂಪಿ ದಕ್ಷಿಣ ವಲಯದ ಲಕ್ಷ್ಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
Next Story