ಅಮಿತ್ ಷಾ ಭೇಟಿ ಹಿನ್ನೆಲೆ: ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಎ.29ರಂದು ಕುಂದಾಪುರ ತಾಲೂಕಿನ ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆ ಯಿಂದ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟದ ಅಬಕಾರಿ ಸನ್ನದುಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಎ.29ನ್ನು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
Next Story





