ಭವಿಷ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸಿ: ಅಶೋಕ್ ಕುಮಾರ್ ರೈ
ಸಂಪ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಸಂಪ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ
ಪುತ್ತೂರು; ಮಕ್ಕಳು ದಾರಿತಪ್ಪದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪೋಷಕರದ್ದಾದರೆ, ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ರೂಪಿಸಲು ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿರುವಂತೆ ನೋಡಿಕೊಳ್ಳಬೇಕಾಗಿದೆ. ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಅವರು ಸಂಪ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಮಗೆ ಧರ್ಮಗಳ ನಡುವಿನ ಜಗಳ, ದ್ವೇಷ ಬೇಡ. ನಮ್ಮ ಮಕ್ಕಳೂ ಅದಕ್ಕೆ ಬಲಿಯಾಗುವುದು ಬೇಡ. ಧರ್ಮ ಧರ್ಮಗಳ ನಡುವೆ ದ್ವೇಷದಿಂದ ಸಮಾಜಕ್ಕ ಗಳಿಸಿಕೊಳ್ಲುವಂತದ್ದು ಏನೂ ಇಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಪರಸ್ಪರ ಒಂದಾಗಿ ಬಾಳಬೇಕು. ದೇಶವು ಹಲವು ಧರ್ಮ, ಜಾತಿಯವರನ್ನೊಳಗೊಂಡ ಸುಂದರ ಹೂದೋಟ, ಈ ಹೂದೋಟ ಹಾಗೇಯೇ ಉಳಿಯಲಿ. ದೇಶದಲ್ಲಿ ಜಾತ್ಯಾತೀತ ಕಲ್ಪನೆ ಉಳಿದುಕೊಳ್ಳಬೇಕಾದರೆ ಹಿಂದೂ ಮುಸ್ಲಿಂ ಪರಸ್ಪರ ಒಟ್ಟಾಗಿರಬೇಕು. ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರ ಜೊತೆ ನಮ್ಮ ಮಕ್ಕಳು ಸೇರದಂತೆ ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್ ಎಂದು ಕಾಂಗ್ರೆಸ್ಸನ್ನು ದೂರುವವನಿಗೂ ಗೊತ್ತಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರಿಗೆ ಬದುಕಲು ಸಾಧ್ಯ ಎಂದು ಇಂದಿರಾಗಾಂಧಿಯನ್ನು, ನೆಹರೂ ಅವರನ್ನು ಹಿಯ್ಯಾಳಿಸುವವನಿಗೆ ಗೊತ್ತಿದೆ ಎಲ್ಲವೂ ಗೊತ್ತಿದ್ದು ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಿರುವವರು ದೆಶದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ಗೆ ಸೇರ್ಪಡೆ: ಈ ಸಂಧರ್ಭದಲ್ಲಿ ಬಿಜೆಪಿ ಬೆಂಬಲಿತ ಆರ್ಯಾಪು ಗ್ರಾಪಂ ಮಾಜಿ ಸದಸ್ಯ ಜಬ್ಬಾರ್ ಮತ್ತಿತರರು ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸನ್ನ ಶೆಟ್ಟಿ , ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದಾಲಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Next Story





