Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸುಳ್ಳುಗಳಿಂದ ಕೂಡಿರುವ ’ ದಿ ಕೇರಳ...

‘ಸುಳ್ಳುಗಳಿಂದ ಕೂಡಿರುವ ’ ದಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಅನುಮತಿ ನೀಡದಂತೆ ಕೇರಳ ಸರಕಾರಕ್ಕೆ ಕಾಂಗ್ರೆಸ್ ಆಗ್ರಹ

28 April 2023 9:56 PM IST
share
‘ಸುಳ್ಳುಗಳಿಂದ ಕೂಡಿರುವ ’ ದಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಅನುಮತಿ ನೀಡದಂತೆ ಕೇರಳ ಸರಕಾರಕ್ಕೆ ಕಾಂಗ್ರೆಸ್ ಆಗ್ರಹ
ತಿರುವನಂತಪುರ,ಎ.28: ಸುಳ್ಳು ಹೇಳಿಕೆಗಳ ಮೂಲಕ ಸಮಾಜದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸಲು ಉದ್ದೇಶಿಸಿರುವ ವಿವಾದಾತ್ಮಕ ಚಲನಚಿತ್ರ ‘ದಿ ಕೇರಳ ಸ್ಟೋರಿ ’ ಯ ಪ್ರದರ್ಶನಕ್ಕೆ ಅನುಮತಿ ನೀಡದಂತೆ ಪ್ರತಿಪಕ್ಷ ಕಾಂಗ್ರೆಸ್ ಶುಕ್ರವಾರ ರಾಜ್ಯ ಸರಕಾರವನ್ನು ಆಗ್ರಹಿಸಿದೆ. ಸುದಿಪ್ತೋ ಸೇನ್ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ದಿ ಕೇರಳ ಸ್ಟೋರಿ’ಯು ಮತಾಂತರಗೊಂಡಿದ್ದಾರೆ,ಮೂಲಭೂತೀಕರಣಕ್ಕೆ ಒಳಗಾಗಿದ್ದಾರೆ ಮತ್ತು ಭಾರತದಲ್ಲಿ ಹಾಗೂ ಜಗತ್ತಿನಾದ್ಯಂತ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ನಿಯೋಜಿಸಲ್ಪಟ್ಟಿದ್ದಾರೆ ಎನ್ನಲಾಗಿರುವ ರಾಜ್ಯದ ಸುಮಾರು 32,000 ಮಹಿಳೆಯರ ನಾಪತ್ತೆಯ ಹಿಂದಿನ ಘಟನೆಗಳನ್ನು ಬಯಲಿಗೆಳೆದಿದೆ ಎಂದು ಚಿತ್ರದ ನಿರ್ಮಾಪಕರು ಹೇಳಿಕೊಂಡಿದ್ದಾರೆ. ಚಿತ್ರನಿರ್ಮಾಪಕರ ಹೇಳಿಕೆಗಳನ್ನು ತಿರಸ್ಕರಿಸಿದ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್ ಅವರು,ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಪ್ರತಿಷ್ಠೆಗೆ ಕಳಕವನ್ನುಂಟು ಮಾಡುವುದು ಚಿತ್ರದ ಉದ್ದೇಶವಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಕೇರಳದ 32,000 ಮಹಿಳೆಯರು ಇಸ್ಲಾಮ್ ಗೆ ಮತಾಂತರಗೊಂಡಿದ್ದಾರೆ ಮತ್ತು ಐಸಿಸ್ ಸದಸ್ಯರಾಗಿದ್ದಾರೆ ಎಂದು ಸುಳ್ಳು ಹೇಳುತ್ತಿರುವ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನೀಡಬಾರದು ಎಂದು ಹೇಳಿದರು. ಅದಾ ಶರ್ಮಾ ನಟಿಸಿರುವ ‘ದಿ ಕೇರಳ ಸ್ಟೋರಿ’ ಮೇ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಚಿತ್ರವು ಏನನ್ನು ಹೇಳಲು ಬಯಸಿದೆ ಎನ್ನುವುದನ್ನು ಅದರ ಟ್ರೇಲರ್ ತೋರಿಸಿದೆ. ಇದು ಅಭಿವ್ಯಕ್ತಿ ಸ್ವಾತಂತ್ರದ ವಿಷಯವಲ್ಲ,ಆದರೆ ಅಲ್ಪಸಂಖ್ಯಾತ ಗುಂಪುಗಳ ಮೇಲೆ ದೋಷಾರೋಪಣೆ ಹೊರಿಸುವ ಮೂಲಕ ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುವ ಸಂಘ ಪರಿವಾರದ ಅಜೆಂಡಾವನ್ನು ಜಾರಿಗೊಳಿಸುವ ಪ್ರಯತ್ನದ ಭಾಗವಾಗಿದೆ. ಕೋಮುವಾದದ ವಿಷವನ್ನು ಉಗುಳುವ ಮೂಲಕ ಕೇರಳವನ್ನು ವಿಭಜಿಸಬಹುದು ಎಂದು ಯಾರೂ ಭಾವಿಸಬಾರದು. ರಾಜ್ಯವು ಧಾರ್ಮಿಕ ವೈಷಮ್ಯವನ್ನು ಬೆಳೆಸುವ ಈ ಉದ್ದೇಶಪೂರ್ವಕ ಕ್ರಮದ ವಿರುದ್ಧ ಒಗ್ಗಟ್ಟಾಗಿ ನಿಲ್ಲುತ್ತದೆ,ಇದು ರಾಜ್ಯದ ಸಂಪ್ರದಾಯವಾಗಿದೆ ಎಂದು ಸತೀಶನ್ ಹೇಳಿಕೆಯಲ್ಲಿ ತಿಳಿಸಿದರು. ಫೇಸ್ಬುಕ್ ಪೋಸ್ಟ್ನಲ್ಲಿ ಚಿತ್ರದ ವಿರುದ್ಧ ತೀವ್ರ ದಾಳಿ ನಡೆಸಿರುವ ಡಿವೈಎಫ್ಐ,ಚಿತ್ರದ ಟ್ರೇಲರ್ ಮಾತ್ರ ಈಗ ಬಿಡುಗಡೆಗೊಂಡಿದ್ದು,ಅದೇ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದೆ. ಚಿತ್ರದ ನಿರ್ಮಾಪಕರು ಸಮಾಜದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸಲು ಮತ್ತು ರಾಜ್ಯದ ಪ್ರತಿಷ್ಠೆಗೆ ಕಳಂಕವನ್ನುಂಟು ಮಾಡಲು ಸಿನೆಮಾ ಮಾಧ್ಯಮದ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ. ಚಿತ್ರದ ವಿರುದ್ಧ ಕಠಿಣ ಕ್ರಮಕ್ಕೂ ಅದು ಆಗ್ರಹಿಸಿದೆ. ಸುದಿಪ್ತೋ ಸೇನ್ ಈ ಹಿಂದೆ ಆಸ್ಮಾ,ಲಕ್ನೋ ಟೈಮ್ಸ್ ಮತ್ತು ದಿ ಲಾಸ್ಟ್ ಮಾಂಕ್ ಚಿತ್ರಗಳನ್ನು ನಿರ್ದೇಶಿಸಿದ್ದರು.
share
Next Story
X