Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತದಾರರನ್ನು ಗೊಂದಲಕ್ಕೀಡು ಮಾಡಲು ಹಲವೆಡೆ...

ಮತದಾರರನ್ನು ಗೊಂದಲಕ್ಕೀಡು ಮಾಡಲು ಹಲವೆಡೆ ಡಮ್ಮಿ ಅಭ್ಯರ್ಥಿಗಳು: ವರದಿ

29 April 2023 1:48 PM IST
share
ಮತದಾರರನ್ನು ಗೊಂದಲಕ್ಕೀಡು ಮಾಡಲು ಹಲವೆಡೆ ಡಮ್ಮಿ ಅಭ್ಯರ್ಥಿಗಳು: ವರದಿ

ಬೆಂಗಳೂರು: ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 389 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ನೈಜ ಸ್ಪರ್ಧಾಳುಗಳಲ್ಲ ಬದಲು ಡಮ್ಮಿ ಅಭ್ಯರ್ಥಿಗಳಾಗಿದ್ದಾರೆ ಎಂದು deccanherald.com ವರದಿ ಮಾಡಿದೆ.

ಯಲಹಂಕ ಕ್ಷೇತ್ರದಲ್ಲಿ ಗರಿಷ್ಠ 20 ಅಭ್ಯರ್ಥಿಗಳಿದ್ದರೆ ಶಾಂತಿನಗರ ಮತ್ತು ಸಿ ವಿ ರಮನ್‌ ನಗರ ಕ್ಷೇತ್ರಗಳಲ್ಲಿ ತಲಾ 10 ಅಭ್ಯರ್ಥಿಗಳಿದ್ದಾರೆ.

ಯಲಹಂಕದಲ್ಲಿ ಕಣದಲ್ಲಿರುವವರ ಪೈಕಿ ಜೆಡಿ(ಎಸ್)‌ ಅಭ್ಯರ್ಥಿ ಸಹಿತ ನಾಲ್ಕು ಅಭ್ಯರ್ಥಿಗಳ ಹೆಸರು ಮುನೇಗೌಡ ಆಗಿದೆ. ಬಿಜೆಪಿಯ ಎಸ್‌ ಆರ್‌ ವಿಶ್ವನಾಥ್‌ ಸಹಿತ ಇಬ್ಬರು ಅಭ್ಯರ್ಥಿಗಳ ಹೆಸರು ವಿಶ್ವನಾಥ್‌ ಆಗಿದೆ. ಮತದಾರರನ್ನು ಗೊಂದಲಕ್ಕೀಡು ಮಾಡಲು ರಾಜಕೀಯ ಪಕ್ಷಗಳು ಅದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತವೆ ಎನ್ನಲಾಗಿದೆ.

ರಾಜಾಜಿನಗರ ಮತ್ತು ಬ್ಯಾಟರಾಯನಪುರದಲ್ಲೂ ತಲಾ 18 ಮತ್ತು 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ರಾಜಾಜಿನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಆಗಿದ್ದರೆ ಅದೇ ಹೆಸರಿನ ಇನ್ನೊಬ್ಬರೂ ಕಣದಲ್ಲಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿ(ಎಸ್)‌ ಹೊರತುಪಡಿಸಿ ಇತರ ಅಭ್ಯರ್ಥಿಗಳು ಅಪರಿಚಿತ ರಾಜಕೀಯ ಪಕ್ಷಗಳವರಾಗಿದ್ದಾರೆ.

ಜಯನಗರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೌಮ್ಯ ರೆಡ್ಡಿ ಸ್ಪರ್ಧಿಸುತ್ತಿದ್ದರೆ ಅದೇ ಹೆಸರಿನ ಸ್ವತಂತ್ರ ಅಭ್ಯರ್ಥಿಯೊಬ್ಬರೂ ಕಣದಲ್ಲಿದ್ದಾರೆ.

ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಸರರನ್ನೇ ಹೋಲುವ ಮೂವರು ಇತರರು ಕಣದಲ್ಲಿದ್ದಾರೆ. ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ ಕೆ ಆರ್‌ ಶ್ರೀಧರ್‌ ಅವರನ್ನು ಕಣಕ್ಕಿಳಿಸಿದ್ದರೆ ಶ್ರೀಧರ್‌ ಹೆಸರಿನ ಇತರ ನಾಲ್ಕು ಮಂದಿ ಕಣದಲ್ಲಿದ್ದಾರೆ.

ಸರಾಸರಿಯಾಗಿ ಪ್ರತಿ ಕ್ಷೇತ್ರದಲ್ಲಿ 12 ರಿಂದ 14 ಅಭ್ಯರ್ಥಿಗಳಿದ್ದು ಹಲವೆಡೆ ಪ್ರಬಲ ಅಭ್ಯರ್ಥಿಗಳ ಮತಗಳು ಹಂಚಿಕೆಯಾಗಿ ಹೋಗುವಂತೆ ಮಾಡಲು ಪಕ್ಷೇತರರನ್ನು ಕಣಕ್ಕಿಳಿಸಲಾಗಿದೆ ಎಂಬುದು ತಿಳಿದು ಬರುತ್ತದೆ ಎಂದು deccanherald.com ವರದಿ ಮಾಡಿದೆ.

share
Next Story
X