ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ

ಮಂಗಳೂರು: ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 33ನೇ ಪದವಿ ಪ್ರದಾನ ಸಮಾರಂಭ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷರಾದ ಅತೀ .ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಅಧ್ಯಕ್ಷೀಯ ಭಾಷಣದಲ್ಲಿ ಪದವೀಧರರನ್ನು ಅಭಿನಂದಿಸಿ, ಹೋಮಿ ಯೋಪಥಿ ವೈದ್ಯಪದ್ಧತಿಯು ವಿಶ್ವದ ಎರಡನೇ ಅತೀ ದೊಡ್ಡ ಪದ್ಧತಿಯೆಂದು ಪರಿಗಣಿಸಲ್ಪಟ್ಟರೂ ಇದನ್ನು ಮುಂದು ವರೆಸಲು ಅನೇಕ ಅಡೆ ತಡೆ ಗಳನ್ನು ದಾಟಿ ಹೋಗಬೇಕು. ಉದಯೋನ್ಮುಖ ವೈದ್ಯರು ಸಂಶೋಧನೆಯಲ್ಲಿ ತಮ್ಮನ್ನುತೊ ಡಗಿ ಸಿಕೊಂಡರೆ ಅದನ್ನು ತೆರವು ಗೊಳಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸಮಾರಂಭದಲ್ಲಿ 97 ಪದವಿ ವಿದ್ಯಾರ್ಥಿಗಳಿಗೆ ಹಾಗೂ 18ಸ್ನಾತಕೋತ್ತರ ಪದವೀದರರಿಗೆ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು. ವಿನಾಯಕಮಿಷನ್ ರಿಸರ್ಚ್ ಫೌಂಡೇಶನ್, ಡೀಮ್ಡ್ ಟು. ಬಿ. ಯುನಿವರ್ಸಿಟಿ, ಸೇಲಂ, ತಮಿಳುನಾಡು ಇದರ ಉಪ ಕುಲಪತಿಯಾದ ಡಾ. ಪಿ.ಕೆ. ಸುಧೀರ್ ರವರು ಮುಖ್ಯ ಅತಿಥಿಯಾಗಿ ಪ್ರಮಾಣ ಪತ್ರ ವಿತರಿಸಿದರು.
ಸಂಸ್ಥೆಯ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ಸ್ವಾಗತಿಸಿದರು. ವೈದ್ಯಕೀಯ ಕ್ಷೇತ್ರದಲ್ಲಿ ಹೋಮಿಯೋಪಥಿ ವೈದ್ಯ ಪದ್ದತಿಯು ಜಗತ್ತಿನಾದ್ಯಂತ 65 ದೇಶಗಳಲ್ಲಿ ಜನಪ್ರಿಯಗೊಂಡಿದ್ದು ಹಲವು ರ್ಯಾಂಕ್ ಹಾಗೂ ಚಿನ್ನದ ಪದಕವನ್ನು ಗಳಿಸುವುದರ ಮೂಲಕ ಸಂಸ್ಥೆಯ ಹೆಮ್ಮೆಗೆ ಕಾರಣರಾಗಿರುವ ಪದವೀದರರನ್ನು ಅಭಿನಂದಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಪಿ.ಕೆ. ಸುಧೀರ್ ರವರು ಪದವಿ ಪ್ರಧಾನ ಸಮಾರಂಭದ ಸಂದೇಶ ದೊಂದಿಗೆ ಫಾದರ್ ಮುಲ್ಲರ್ ಸಂಸ್ಥೆಯಲ್ಲಿನ ತಮ್ಮ ಅನುಭ ವವನ್ನು ಸಭೆಯಲ್ಲಿ ಹಂಚಿಕೊಂಡು ಅಂದಿನ ನಿರ್ದೇಶಕರು, ಆಡಳಿತಾಧಿಕಾರಿಗಳು ಹೋಮಿಯೋಪಥಿ ಕಾಲೇಜನ್ನು ಮುಂದುವರೆಸಲು ಪಟ್ಟ ಪರಿಶ್ರಮವನ್ನು ಸ್ಮರಿಸಿದರು. ಘಟಿಕೋತ್ಸವದ ದಿನವು ಪ್ರತಿ ಪದವೀಧರರ ಜೀವನದಲ್ಲಿ ಸ್ಮರಣೀಯ ದಿನ ಹಾಗೂ ಈ ದಿನಕ್ಕಾಗಿ ಅವರ ಪರಿಶ್ರಮ ಹಾಗೂಪೋಷಕರ ಬೆಂಬಲವನ್ನು ಶ್ಲಾಘಿಸಿದರು ಮತ್ತು ತನಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಭಾಗವಹಿಸಲು ಅವಕಾಶ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಇ.ಎಸ್.ಜೆ. ಪ್ರಭು ಕಿರಣ್ ರವರು ವಾರ್ಷಿಕ ವರದಿಯಲ್ಲಿ 2022-23ರಲ್ಲಿ ಕಾಲೇಜಿನಲ್ಲಿ ನಡೆದ ಚಟುವಟಿಕೆಗಳನ್ನು ಪ್ರಸ್ತುತಪಡಿಸಿದರು ಮತ್ತು ಪದವಿಸ್ವೀಕರಿಸಿದ ಹೋಮಿಯೋಪಥಿ ವೈದ್ಯರ ಪ್ರಮಾಣವಚನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪದವೀದರರ ಪರವಾಗಿ ಡಾ. ದರ್ಶನಾ ಪದ್ಮನಾಭನ್ ರವರುತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಘೋಷಿಸಿದ 2 ಚಿನ್ನದ ಪದಕವನ್ನು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪದವೀಧರೆ ಡಾ. ಆಶ್ರಿತಾ ಬಿ.ಎ. ಹಾಗೂ ಮತ್ತೊಂದು ಚಿನ್ನದ ಪದಕವನ್ನು ಸ್ನಾತಕೋತ್ತರ ಪದವಿಯ ಮೆಟಿರಿಯಾ ಮೆಡಿಕಾ ವಿಭಾಗದಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಡಾ. ರೆಮ್ಯಾ ವರ್ಗೀಸ್ ಪಡೆದಿದ್ದು ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಅಕ್ಟೋಬರ್ 2022 ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ10 ಸ್ನಾತಕೋತ್ತರ ವಿದ್ಯಾರ್ಥಿಗಳನ್ನೂ ಬಿಷಪ್‌ರವರು ಸನ್ಮಾನಿಸಿದರು.
ಸೆಂಟ್ರಲ್ ಕೌನ್ಸಿಲ್ ಆಫ್ ರಿಸರ್ಚ್ ಇನ್ ಹೋಮಿಯೋಪಥಿ ವತಿಯಿಂದ ಸ್ನಾತಕೋತ್ತರ ಪದವಿಯ ಅತ್ಯುತ್ತಮಪ್ರಬಂದ ಮಂಡಣೆಗಾಗಿ ನೀಡಿರುವ ವಿದ್ಯಾರ್ಥಿವೇತನವನ್ನು ನಮ್ಮ ಕಾಲೇಜಿನ 2018-19 ರ ಹೋಮಿಯೋಪಥಿ ಸೈಕ್ಯಾಟ್ರಿ ವಿಭಾಗದ ಡಾ. ಸುದಿಪ್ತಿ ಸಿಂಗ್ ರವರನ್ನು ಗೌರವಿಸಲಾಯಿತು.6ನೇ ಮುಲ್ಲೇರಿಯನ್ ಬ್ಯಾಚ್ ಪ್ರಾಯೋಜಿಸಿದ ‘ಡಾ. ಸುಮೊದ್ ಜಾಕೊಬ್ ಸೊಲೊಮನ್ ಪ್ರಶಸ್ತಿ’ಯನ್ನು 2019-20 ಬ್ಯಾಚ್ ಹೋಮಿಯೋಪಥಿ ಸ್ನಾತಕೋತ್ತರ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗೈದ ಡಾ. ರೆಮ್ಯಾ ವರ್ಗೀಸ್ ರವರಿಗೆ ನೀಡಿಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹರವರು ಪ್ರತಿಷ್ಠಿತ ಅಧ್ಯಕ್ಷೀಯ ಚಿನ್ನದ ಪದಕವನ್ನು ಅತ್ಯುತ್ತಮ ಸಾಧನೆ ಮಾಡಿದ ಹೋಮಿಯೋಪಥಿ ಪದವಿ ವಿದ್ಯಾರ್ಥಿನಿ ಡಾ. ಜಿದ್ದು ಸಾಯಿ ಅಖಿಲ ರವರಿಗೆ ಹಾಗೂ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಯನ್ನು ಡಾ. ಸ್ಟೆಫಿ ವರ್ಗೀಸ್ ರವರಿಗೆ ನೀಡಿ ಗೌರವಿಸಿದರು.
ಸಮಾರಂಭದ ವೇದಿಕೆಯಲ್ಲಿ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿ’ಸೋಜ, ಹೋಮಿ ಯೋಪಥಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ರಾದ ಡಾ. ಗಿರೀಶ್ ನಾವಡ ಯು.ಕೆ., ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ರಂಜನ್ ಕ್ಲೆಮೆಂಟ್ ಬ್ರಿಟ್ಟೊರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಗಳಾದ ವಂ. ರೋಶನ್ ಕ್ರಾಸ್ತಾರವರು ವಂದನಾರ್ಪಣೆಗೈದರು. ಡಾ. ದೀಪಾ ರೆಬೆಲ್ಲೊ ಹಾಗೂ ಡಾ. ಮನಿಷ್ ಎಸ್ ತಿವಾರಿ ರವರು ಪದವಿ ಪ್ರದಾನ ಕಾರ್ಯಕ್ರಮವನ್ನು ನಿರೂಪಿಸಿದರು.
