ಮಂಗಳೂರು ನಗರದಲ್ಲಿ ಅಮಿತ್ ಶಾ ರೋಡ್ ಶೋ

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರೋಡ್ ಶೋ ಮಂಗಳೂರು ನಗರದಲ್ಲಿ ಶನಿವಾರ ನಡೆಯಿತು.
ನಗರದ ಪುರಭವನ ಸಮೀಪದ ಕ್ಲಾಕ್ ಟವರ್‌ನಿಂದ ಕೊಡಿಯಾಲ್ ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ ಈ ರೋಡ್ ಶೋ ನಡೆಯಿತು. ಕಾರ್ಯಕರ್ತರು, ಬೆಂಬಲಿಗರು ರೋಡ್ ಶೋದಲ್ಲಿ ಪಾಲ್ಗೊಂಡರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಅವರು ಅಮಿತ್ ಶಾಗೆ ಸಾಥ್ ನೀಡಿದರು.












