Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮನೆಯಲ್ಲೇ ಮತದಾನ ಹಕ್ಕು...

ಉಡುಪಿ: ಮನೆಯಲ್ಲೇ ಮತದಾನ ಹಕ್ಕು ಚಲಾಯಿಸಿದ ಹಿರಿಯರು, ವಿಕಲಚೇತನರು

29 April 2023 8:35 PM IST
share
ಉಡುಪಿ: ಮನೆಯಲ್ಲೇ ಮತದಾನ ಹಕ್ಕು ಚಲಾಯಿಸಿದ ಹಿರಿಯರು, ವಿಕಲಚೇತನರು

ಉಡುಪಿ, ಎ.29: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಒದಗಿಸಿದ್ದು, ಅದರಂತೆ ಈ ಸೌಲಭ್ಯವನ್ನು ಜಿಲ್ಲೆಯ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಸದುಪಯೋಗಪಡಿಸಿಕೊಳ್ಳುತಿದ್ದಾರೆ. 

ಜಿಲ್ಲೆಯಲ್ಲಿ ಇಂದಿನಿಂದ ಆರಂಭಗೊಂಡ ಮನೆಯಲ್ಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಹಲವು ಮಂದಿ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಬಳಸಿಕೊಂಡು ತಮ್ಮ ಮತದ ಹಕ್ಕನ್ನು ಚಲಾಯಿಸಿ ಅದನ್ನು ಮತಪೆಟ್ಟಿಗೆಯಲ್ಲಿ ಭದ್ರ ಪಡಿಸಿದರು. 

ಉಡುಪಿ ವಿಧಾನಸಭಾ ಕ್ಷೇತ್ರದ ಸೆಕ್ಟರ್ 17ರಲ್ಲಿ ಕಿದಿಯೂರು ಗ್ರಾಮದ 83 ವರ್ಷದ ಸುನಂದ ಭಟ್ ತಮ್ಮ ಸೊಸೆ ಶೋಭಾ ಭಟ್ ಸಹಕಾರದಿಂದ ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಿದರು. ಅದೇ ರೀತಿ ಕಿದಿಯೂರು ಗ್ರಾಮದ 87 ವರ್ಷದ ಸೀತಾರಾಮ ಭಟ್ ಮತ್ತು 81 ವರ್ಷದ ಉಷಾ ಭಟ್ ದಂಪತಿಗಳು ಮನೆಯವರ ಸಹಕಾರ ಪಡೆಯದೇ ತಾವೇ ಸ್ವಯಂ ಮತ ಚಲಾಯಿಸಿ, ತಮ್ಮ ಮತವನ್ನು ಹೆಮ್ಮೆಯಿಂದ ಚಲಾಯಿಸಿ ಮತಪತ್ರ ವನ್ನು ಮತಪೆಟ್ಟಿಗೆಗೆ ಹಾಕಿದರು.

ಮತದಾನ ಮಾಡಿದ ನಂತರ ಮಾತನಾಡಿದ ಸೀತಾರಾಮ ಭಟ್, ವಯೋ ಸಹಜತೆಯಿಂದ ನಡೆಯಲು ತುಂಬಾ ಕಷ್ಟವಾಗುತ್ತಿದ್ದು, ಮತದಾನ ಕೇಂದ್ರಕ್ಕೆ ತೆರಳುವುದು ಅಸಾಧ್ಯವಾಗಿತ್ತು, ಈ ಸೌಲಭ್ಯದಿಂದ ಅನುಕೂಲವಾಗಿದ್ದು, ಮನೆಯಿಂದಲೇ ಹಕ್ಕು ಚಲಾಯಿಸಿರುವುದು ಸಂತಸ, ತೃಪ್ತಿ ತಂದಿದೆ ಎಂದರು.

ಇಂದು ಮತದಾನ ಕಾರ್ಯಕ್ರಮಕ್ಕೆ ಮನೆಗೆ ಆಗಮಿಸುವ ಕುರಿತಂತೆ ಮುಂಚಿತವಾಗಿಯೇ ಬಿಎಲ್‌ಓಗಳ ಮೂಲಕ ಸಂಬಂಧಪಟ್ಟ ಮತದಾರರಿಗೆ ಮಾಹಿತಿ ನೀಡಿದ್ದು, ಅಗತ್ಯ ಗುರುತು ದಾಖಲೆಗಳನ್ನು  ಸಿದ್ದವಾಗಿಟ್ಟು ಕೊಳ್ಳುವಂತೆ ಹಾಗೂ ಅನಿವಾರ್ಯ ಮತ್ತು ತುರ್ತು ಸಂದರ್ಭ ಹೊರತು ಪಡಿಸಿ ಹೊರಗೆ ತೆರಳದೇ ಮನೆಯಲ್ಲಿಯೇ ಇರುವಂತೆ ತಿಳಿಸಲಾಗಿತ್ತು. 

ಮತದಾನ ಪೆಟ್ಟಿಗೆ ಮತ್ತು ಮತದಾನ ಪ್ರಕ್ರಿಯೆಗೆ ಅಗತ್ಯವಿದ್ದ ಉಪಕರಣಗಳೊಂದಿಗೆ ಬಿಎಲ್‌ಓ ಅವರ ನೆರವಿ ನಿಂದ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರ ಮನೆಗೆ ತೆರಳಿ, ಚುನಾವಣಾ ಆಯೋಗ ನೀಡಿದ ಎಲ್ಲಾ ನಿರ್ದೇಶನಗಳನ್ನು ಯಥಾವತ್ತಾಗಿ ಪಾಲಿಸಿ, ಯಾವುದೇ ಸಂದರ್ಭದಲ್ಲೂ ಮತದಾನದ ಗೌಪ್ಯತೆ ಉಲ್ಲಂಘನೆ ಆಗದಂತೆ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯನಿರ್ವಹಿಸಲಾಯಿತು.  

ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸುದಿನ ಅವರು, ಮತದಾನ ಮಾಡುವ ಪ್ರಕ್ರಿಯೆಗಳ ಕುರಿತು ಹಿರಿಯ ನಾಗರಿಕರಿಗೆ ಸಂಪೂರ್ಣ ಮಾಹಿತಿ ನೀಡಿ, ಮತದಾರರು ಯಾವುದೇ ಗೊಂದಲಗಳಿಗೆ ಒಳಗಾಗದೇ ಮತದಾನ ಮಾಡುವಂತೆ ತಿಳಿಸಿದರು.

ಮೈಕ್ರೋ ಅಬ್ಸರ್‌ವರ್ ತರುಣ್‌ ಕುಮಾರ್, ಸಹಾಯಕ ಮತಗಟ್ಟೆ ಅಧಿಕಾರಿ ವಿಷ್ಣು ಮೊಗೇರಾ, ಬಿಎಲ್‌ಓ ಗೀತಾ ಮತದಾನ ಪ್ರಕ್ರಿಯೆಯಲ್ಲಿ ಸಹಕರಿಸಿದರು.

share
Next Story
X