ಕರ್ಜೆಯಿಂದ ಬ್ರಹ್ಮಾವರದವರೆಗೆ ಕಾಂಗ್ರೆಸ್ ಬೈಕ್ ರ‍್ಯಾಲಿ

ಬ್ರಹ್ಮಾವರ, ಎ.29: ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರ್ಜೆಯಿಂದ ಬ್ರಹ್ಮಾವರದ ವರೆಗೆ ಬೈಕ್ ರ‍್ಯಾಲಿಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ರ‍್ಯಾಲಿಗೆ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಚಾಲನೆ ನೀಡಿದರು. ಬೈಕ್ ರ‍್ಯಾಲಿಯಲ್ಲಿ ಸಹಸ್ರಾರು ಕಾರ್ಯ ಕರ್ತರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ದೀಪಕ್ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು ಮೊದಲಾದವರು ಉಪಸ್ಥಿತರಿದ್ದರು.
Next Story