Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಚಾಲೆಂಜ್ ವೋಟ್, ಟೆಂಡರ್ ವೋಟ್':...

'ಚಾಲೆಂಜ್ ವೋಟ್, ಟೆಂಡರ್ ವೋಟ್': ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಸುಳ್ಳು ಮಾಹಿತಿ !

ಇಲ್ಲಿದೆ ಸತ್ಯಾಂಶ

29 April 2023 9:12 PM IST
share
ಚಾಲೆಂಜ್ ವೋಟ್, ಟೆಂಡರ್ ವೋಟ್: ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಸುಳ್ಳು ಮಾಹಿತಿ !
ಇಲ್ಲಿದೆ ಸತ್ಯಾಂಶ

ಹೊಸದಿಲ್ಲಿ: ಮತದಾನ ಪ್ರಕ್ರಿಯೆಯ ಬಗ್ಗೆ ನಕಲಿ ಮಾಹಿತಿಯಿರುವ ಸಂದೇಶವೊಂದು ವಾಟ್ಸ್ ಆ್ಯಪ್‌ ನಲ್ಲಿ ಹರಿದಾಡುತ್ತಿದೆ. ಭಾರತದ ಮತದಾನ ಪ್ರಕ್ರಿಯೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ "ಚಾಲೆಂಜ್ ವೋಟ್" ಮತ್ತು "ಟೆಂಡರ್ ವೋಟ್" ಪರಿಕಲ್ಪನೆಗಳ ಬಗ್ಗೆ ಸುಳ್ಳು ಹೇಳಿಕೆಗಳನ್ನು ಈ ಸಂದೇಶವು ಹರಡುತ್ತಿದೆ. 

ಒಂದು ವೇಳೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿದ್ದರೆ, ಮತದಾರರು ತಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ “ಚಾಲೆಂಜ್‌ ವೋಟ್‌” ಗಾಗಿ ಮನವಿ ಮಾಡಲು ಈ ವೈರಲ್‌ ಸಂದೇಶದಲ್ಲಿ ಸಲಹೆ ನೀಡಲಾಗಿದೆ. ಆದರೆ, ವಾಸ್ತವದಲಿ, ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಯಾವುದೇ ವ್ಯಕ್ತಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. 

ವಾಸ್ತವದಲ್ಲಿ “ಚಾಲೆಂಜ್‌ ವೋಟ್” ಎಂದರೆ, ಮತದಾನ ಗಟ್ಟೆಯಲ್ಲಿರುವ ಏಜೆಂಟರುಗಳಿಗಿರುವ ಅವಕಾಶವಾಗಿದೆ. ಒಂದು ವೇಳೆ ಗುರುತಿನ ಚೀಟಿಯೊಂದಿಗೆ  ಮತದಾರನ ಚಹರೆ ಹೋಲಿಕೆಯಾಗದಿದ್ದರೆ, ಬೂತ್‌ ಏಜೆಂಟರುಗಳು ತಕರಾರು ಎತ್ತಬಹುದು, ಅದನ್ನು ಅಧಿಕಾರಿಗಳು ಪರಿಶೀಲನೆ ನಡೆಸಬೇಕಾಗುತ್ತದೆ. ಈ ಪ್ರಕ್ರಿಯೆಯನ್ನು ʼಚಾಲೆಂಜ್‌ ವೋಟ್‌ʼ ಎನ್ನಲಾಗುತ್ತದೆ. ಹಾಗಾಗಿ, ವೈರಲ್‌ ಸಂದೇಶದಲ್ಲಿರುವ ಚಾಲೆಂಜ್‌ ವೋಟ್‌ ಪರಿಕಲ್ಪನೆಯೇ ತಪ್ಪಾಗಿದೆ.  ಅಲ್ಲದೆ, ಸಂದೇಶದಲ್ಲಿ ವಿವರಿಸಿದಂತೆ ಚುನಾವಣಾ ನಿಯಮಗಳು 1961 ರ ಸೆಕ್ಷನ್ 49A ಅಡಿಯಲ್ಲಿ "ಚಾಲೆಂಜ್‌ ವೋಟ್‌" ಪರಿಕಲ್ಪನೆಯು ಬರುವುದಿಲ್ಲ. 

ತಮ್ಮ ಮತವನ್ನು ಬೇರೊಬ್ಬರು ಚಲಾಯಿಸಿದ್ದಾರೆ ಎಂದು ಯಾವುದಾದರೂ ಮತದಾರ ಕಂಡುಕೊಂಡರೆ, ಆ ಮತದಾರ "ಟೆಂಡರ್ ವೋಟ್" ಗೆ ವಿನಂತಿಸಬಹುದು ಎಂದು ಸಂದೇಶದಲ್ಲಿ ಹೇಳಿರುವುದು ಸತ್ಯವಾಗಿದೆ. ಆದಾಗ್ಯೂ, ಯಾವುದೇ ಮತಗಟ್ಟೆಯಲ್ಲಿ 14% ಕ್ಕಿಂತ ಹೆಚ್ಚು ಟೆಂಡರ್ ಮತಗಳನ್ನು ದಾಖಲಿಸಿದರೆ ಮರುಚುನಾವಣೆ ನಡೆಸಲಾಗುತ್ತದೆ ಎಂಬ ಪ್ರತಿಪಾದನೆಯು ಸುಳ್ಳು. ಟೆಂಡರ್ ಮಾಡಿದ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ ಅದನ್ನು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಟೆಂಡರ್‌ ಮಾಡಿದ ಮತಗಳು ಗೆಲುವಿನ ಅಂತರಕ್ಕಿಂತ ಹೆಚ್ಚಿದ್ದರೆ ಮಾತ್ರ ಅವುಗಳನ್ನು ಪರಿಗಣಿಸಲಾಗುತ್ತದೆ. ಅಲ್ಲದೆ, ಚುನಾವಣಾ ಆಯೋಗದ ಕೈಪಿಡಿಯು ಮರುಮತದಾನ ನಡೆಸಲು ಯಾವುದೇ ನಿರ್ದಿಷ್ಟ ಶೇಕಡಾವಾರು ಪ್ರಮಾಣವನ್ನು ಉಲ್ಲೇಖಿಸಿಲ್ಲವಾದ್ದರಿಂದ ಈ ಪ್ರತಿಪಾದನೆಯು ಸುಳ್ಳು. 

ಈ ಹಿಂದೆ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಮತ ಚಲಾಯಿಸಲು ಸಾಧ್ಯವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ವಕ್ತಾರೆ ಶೆಫಾಲಿ ಶರಣ್ ಖಚಿತಪಡಿಸಿದ್ದರು. ಆದ್ದರಿಂದ, ಮತದಾರರ ಪಟ್ಟಿಯಲ್ಲಿಲ್ಲದ ಮತದಾರರು ತಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ಬಳಸಿಕೊಂಡು "ಚಾಲೆಂಜ್‌ ವೋಟ್" ಕೇಳಬಹುದು ಎಂಬ ಹೇಳಿಕೆಯು ತಪ್ಪು ದಾರಿಗೆಳೆಯುವ ಹಾಗೂ ಸುಳ್ಳು ಪ್ರತಿಪಾದನೆಯಾಗಿದೆ.
 
ಮತದಾನ ಪ್ರಕ್ರಿಯೆಯ ಬಗ್ಗೆ ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿಗಳನ್ನು ಹರಡುವುದು ಮತದಾರರ ವಿಶ್ವಾಸದ ಮೇಲೆ ಪರಿಣಾಮ ಬೀರಬಹುದು, ಅಲ್ಲದೆ, ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸದಂತೆ ನಿರುತ್ಸಾಹಗೊಳಿಸಬಹುದು. ಆದ್ದರಿಂದ, ಇತರರೊಂದಿಗೆ ಹಂಚಿಕೊಳ್ಳುವ ಮೊದಲು ಮಾಹಿತಿಯನ್ನು ಪರಿಶೀಲಿಸುವುದು ಅತ್ಯಗತ್ಯವಾಗಿದೆ. ಮತದಾರರು ತಮ್ಮ ಸ್ಥಳೀಯ ಚುನಾವಣಾ ಅಧಿಕಾರಿಗಳನ್ನು ಅಥವಾ ಭಾರತೀಯ ಚುನಾವಣಾ ಆಯೋಗವನ್ನು ಸಂಪರ್ಕಿಸಿ ಮತದಾನ ಪ್ರಕ್ರಿಯೆಯ ಬಗ್ಗೆ ಯಾವುದೇ ಅನುಮಾನಗಳಿದ್ದರೆ ಪರಿಹರಿಸಿಕೊಳ್ಳಬಹುದಾಗಿದೆ.

share
Next Story
X