ದೈವಸ್ಥಾನದ ಕಾಣಿಕೆ ಡಬ್ಬಿ ಕಳವು

ಉಡುಪಿ, ಎ.29: ದೊಡ್ಡಣಗುಡ್ಡೆಯ ಪಂಚಧೂಮಾವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯ ಹಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಎ.28ರಂದು ಬೆಳಗಿನ ಜಾವ 25 ರಿಂದ 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ದೈವಸ್ಥಾನದ ಹೊರಗಡೆಯ ದೈವದ ಮೂಲಗುಡಿಯ ಪಕ್ಕದಲ್ಲಿರುವ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಅಂದಾಜು 20,000ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story