Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸಹಾಯಕ ಬಡವರ ಮೇಲೆ ನಿಮಗೆ ಯಾಕಿಷ್ಟು...

ಅಸಹಾಯಕ ಬಡವರ ಮೇಲೆ ನಿಮಗೆ ಯಾಕಿಷ್ಟು ದ್ವೇಷ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

29 April 2023 10:06 PM IST
share
ಅಸಹಾಯಕ ಬಡವರ ಮೇಲೆ ನಿಮಗೆ ಯಾಕಿಷ್ಟು ದ್ವೇಷ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಮೋದಿ, ಖಾಸಾ ಗೆಳೆಯ ಅದಾನಿ ಉದ್ಯಮ ಸಾಮ್ರಾಜ್ಯದ ಕಳ್ಳಾಟಗಳನ್ನು ‘ಹಿಂಡನ್ ಬರ್ಗ್’ ವರದಿ ಬೆತ್ತಲೆ ಮಾಡಿದೆ. ಈ ಕಳ್ಳಾಟದಿಂದ ದೇಶದ ಆರ್ಥಿಕತೆ ಕುಸಿದುಹೋಗುವ ಅಪಾಯ ಎದುರಿಸುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಇದು ಸುದ್ದಿಯಾಗಿ ದೇಶದ ಮಾನ ಹರಜಾಗುತ್ತಿದೆ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟವರು, ಎಲ್‍ಐಸಿಯಲ್ಲಿ ಪಾಲಿಸಿ ಖರೀದಿಸಿದವರು ಆತಂಕದಲ್ಲಿದ್ದಾರೆ. 56 ಇಂಚಿನ ಎದೆಯ ಮೋದಿಯವರು ಯಾಕೆ ಈ ಬಗ್ಗೆ ತನಿಖೆ ಮಾಡದೆ ಮೌನಿಬಾಬಾ ಆಗಿದ್ದಾರೆ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶನಿವಾರ ‘ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿಯವರನ್ನು ರಾಜ್ಯದ ಜನತೆಯ ಪರವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು. ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ’ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

‘ಬೆಲೆ ಕುಸಿತ ಮತ್ತು ಬೀಜ-ಗೊಬ್ಬರದ ಬೆಲೆ ಏರಿಕೆಯಿಂದಾಗಿ ಹತ್ತಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಹೀಗಿದ್ದರೂ ಹತ್ತಿ ನಿಗಮದ ಬೆಂಬಲ ಬೆಲೆಯ ಅನುದಾನವನ್ನು 782 ಕೋಟಿ ರೂ.ಗಳಿಂದ 1 ಲಕ್ಷ ರೂ.ಗೆ ಇಳಿಸಿದ್ದೀರಿ. ರೈತರಿಗೆ ನೆರವಾಗುವ ಯೋಜನೆಗಳನ್ನೆ ಸ್ಥಗಿತಗೊಳಿಸಿ ರೈತರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದೀರಾ?’ ಎಂದು ಅವರು ಟೀಕಿಸಿದ್ದಾರೆ.

‘ತಮಗೆ ತಿಳಿದಿರುವಂತೆ ಬಡಜನರ ಹಸಿದ ಹೊಟ್ಟೆಯನ್ನು ತಣಿಸಲು ಯುಪಿಎ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದು 80ಕೋಟಿ ಜನರಿಗೆ ಆಹಾರಧಾನ್ಯ ವಿತರಿಸಿತ್ತು. ಆದರೆ ನಿಮ್ಮ ಸರಕಾರದ ಈ ಸಾಲಿನ ಬಜೆಟ್‍ನಲ್ಲಿ ಆಹಾರ ಸಬ್ಸಿಡಿಯನ್ನು ಶೇ.31ರಷ್ಟು ಕಡಿತಗೊಳಿಸಿ ಬಡವರ ಹೊಟ್ಟೆಗೆ ಕಲ್ಲು ಹಾಕಿದ್ದು ಯಾಕೆ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಉಚಿತ ಎಲ್‍ಪಿಜಿ ಸಿಲಿಂಡರ್ ಎಂಬ ಪೊಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿರಿ, 8 ವರ್ಷಗಳಿಂದ ಎಲ್‍ಪಿಜಿ ಸಿಲಿಂಡರ್ ಬೆಲೆ ನಾಲ್ಕುಪಟ್ಟಾಗಿದೆ. ಹಳ್ಳಿಯ ಬಡವರು ಮತ್ತೆ ಉರುವರಲು ಹಾಕಿ ಒಲೆ ಉರಿಸಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಇದರ ಹೊರತಾಗಿಯೂ ಎಲ್‍ಪಿಜಿ ಮೇಲಿನ ಸಬ್ಸಿಡಿಯನ್ನು ಶೇ.75ರಷ್ಟು (2,257 ಕೋಟಿ ರೂ.) ಕಡಿಮೆ ಮಾಡಲಾಗಿದೆ. ಅಸಹಾಯಕ ಬಡವರ ಮೇಲೆ ನಿಮಗೆ ಯಾಕಿಷ್ಟು ದ್ವೇಷ?’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ಬೆಂಗಳೂರು ಮೆಟ್ರೋ ಯೋಜನೆಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‍ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೋದಿಯವರೇ ನಿಮಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ? ಬಾಯಲ್ಲಿ ರೈತರ ಗುಣಗಾನ ಮಾಡುವ ಮೋದಿಯವರು ಬಜೆಟ್‍ನಲ್ಲಿ ಮಾಡಿದ್ದೇನು ಗೊತ್ತಾ?’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರೈತರ ಆದಾಯ ದುಪ್ಪಟ್ಟುಗೊಳಿಸುತ್ತೇನೆ ಎಂದು ಬುರುಡೆಬಿಟ್ಟು ಅಧಿಕಾರಕ್ಕೆ ಬಂದಿರುವ ಮೋದಿ ಅವರೇ ನೀವು ರೈತರಿಗಾಗಿ ಮಾಡಿದ್ದೇನು ಗೊತ್ತಾ? ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು 50,121 ಕೋಟಿ ರೂ.ಗಳಷ್ಟು ಕಡಿಮೆ ಮಾಡಿದ್ದೀರಿ, ಯಾಕೆ? ಸಚಿವರಾಗಿದ್ದ ಈಶ್ವರಪ್ಪಗೆ ಶೇ.40 ಕಮಿಷನ್ ನೀಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಿಸಿಲ್ಲ, ಸತ್ತಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ?’ ಎಂದು ಅವರು ಟೀಕಿಸಿದ್ದಾರೆ.

‘ಕೆ.ಆರ್ ಪುರಂನ ಇನ್ಸ್‍ಪೆಕ್ಟರ್ ನಂದೀಶ್ 80 ಲಕ್ಷ ರೂ.ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ ಸಾಮಾನ್ಯರ ಗತಿ ಏನು ಮೋದಿ ಅವರೇ? ಶೇ.40 ಕಮಿಷನ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯ ಹಣ ನೀಡದೆ ಸತಾಯಿಸಿದ ಬಿಜೆಪಿ ಸರಕಾರದ ಹಣದಾಸೆಗೆ ಗುತ್ತಿಗೆದಾರ ಪ್ರಸಾದ್ ಬಲಿಯಾದ. ಈ ಸಾವಿನ ಸರಣಿಯನ್ನು ಕೊನೆಗಾಣಿಸುವವರು ಯಾರು ಮೋದಿ ಅವರೇ?’ ಎಂದು ಅವರು ಕಿಡಿಕಾರಿದ್ದಾರೆ.

‘ತನ್ನ ಸಾವಿನ ಮೂಲಕ ಬಿಜೆಪಿಗೆ ಭರ್ಜರಿ ರಾಜಕೀಯ ಲಾಭ ಮಾಡಿಕೊಟ್ಟ ಪರೇಶ್ ಮೇಸ್ತಾನ ವಯೋವೃದ್ಧ ತಂದೆ-ತಾಯಿ ಕುಟುಂಬಕ್ಕೆ ನ್ಯಾಯ ಬೇಕು. ಪಿಎಸ್ಸೈ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ’
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಮಗೆ ನನ್ನ ಪ್ರಶ್ನೆಯಿದು.

ಈ ಪ್ರಶ್ನೆಗೆ ನಿಮ್ಮ ಭಾಷಣದಲ್ಲಿ ಉತ್ತರ ನೀಡುವಿರೆಂದು ನಂಬಿದ್ದೇನೆ.#AnswerMadiModi pic.twitter.com/DUg1enIITe

— Siddaramaiah (@siddaramaiah) April 29, 2023
share
Next Story
X