Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾಷಣದಲ್ಲಿ ಬಿಜೆಪಿಯನ್ನು ಕಟ್ಟಿ...

ಭಾಷಣದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಯಡಿಯೂರಪ್ಪ ಹೆಸರೆತ್ತಲಿಲ್ಲವೇಕೆ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

29 April 2023 11:28 PM IST
share
ಭಾಷಣದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಯಡಿಯೂರಪ್ಪ ಹೆಸರೆತ್ತಲಿಲ್ಲವೇಕೆ?: ಪ್ರಧಾನಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ಪ್ರಧಾನಿ ಮೋದಿ ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿ ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ?’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶನಿವಾರ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ‘ರಾಜ್ಯದ ಬಿಜೆಪಿ ಸಚಿವರ 40 ಕಮಿಷನ್ ಕಿರುಕಳದ ವಿರುದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ?’ ಎಂದು ಟೀಕಿಸಿದ್ದಾರೆ.

‘ಮೂರುವರೆ ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂ.ಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ, ನಿಮ್ಮಂತಹ ಭ್ರಷ್ಟರ ಸರಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ. ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷಣದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ?’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಸರಕಾರದ ಕಾಲದಲ್ಲಿಯೇ ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ?’ ಎಂದು ಅವರು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

‘ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ?’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

‘ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ’ ಎಂದು ಅವರು ಆಗ್ರಹಿಸಿದ್ದಾರೆ.

‘ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ?’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಿನ್ನೆ ತಾನೆ ಸೋನಿಯಾ ಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಸೂಯೆಯ ವಿಷ ಇಲ್ಲವೇ?’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ನಿಮ್ಮದೇ ಪಕ್ಷ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ? ಪ್ರತಿಷ್ಠಿತ ಕೆಎಸ್‍ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದನ್ನಲ್ಲಾ? ಮಾಡಾಳ್ ಮನೆಯಲ್ಲಿ ಎಂಟುವರೆ ಕೋಟಿ ರೂ.ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ ಅದೇನು ಅವರು ಬೆಳೆದ ಅಡಿಕೆಯ ಮಾರಾಟದ ದುಡ್ಡೇ?’ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

‘ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ! ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ !
ತನ್ನ ಬಣ್ಣಿಸಬೇಡ
ಇದಿರ ಹಳಿಯಲು ಬೇಡ !
ಇದೇ ಅಂತರಂಗ ಶುದ್ದಿ
ಇದೇ ಬಹಿರಂಗ ಶುದ್ದಿ !
- @narendramodi ಅವರೇ ನಿಮ್ಮ ಇಂದಿನ ಭಾಷಣ ಕೇಳಿ ಬಸವಣ್ಣನವರ ಈ ವಚನ ನೆನಪಾಯಿತು.
ಇದು ನಿಮ್ಮ ನಡೆ-ನುಡಿಗೆ ಹೇಳಿ ಮಾಡಿಸಿದಂತಿದೆ. 1/13 pic.twitter.com/Nvzy9ARex3

— Siddaramaiah (@siddaramaiah) April 29, 2023

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, @BJP4India ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ @narendramodi? 2/13

— Siddaramaiah (@siddaramaiah) April 29, 2023

ರಾಜ್ಯದ @BJP4Karnataka ಸಚಿವರ 40% ಕಮಿಷನ್ ಕಿರುಕಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ?
ಕಳೆದ ಮೂರುವರೆ ವರ್ಷಗಳಲ್ಲಿ ಒಂದೂವರೆ…

— Siddaramaiah (@siddaramaiah) April 29, 2023

ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ?
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ…

— Siddaramaiah (@siddaramaiah) April 29, 2023
share
Next Story
X