Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತಿಸ್‌ಗಢ ಚುನಾವಣೆಗೆ ಮುನ್ನ ಬಿಜೆಪಿ...

ಛತ್ತಿಸ್‌ಗಢ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಹಿರಿಯ ಬುಡಕಟ್ಟು ಮುಖಂಡ

1 May 2023 8:26 AM IST
share
ಛತ್ತಿಸ್‌ಗಢ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಹಿರಿಯ ಬುಡಕಟ್ಟು ಮುಖಂಡ

ರಾಯಪುರ: ಅವಿಭಜಿತ ಮಧ್ಯಪ್ರದೇಶ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಬುಡಕಟ್ಟು ಜನಾಂಗದ ಮುಖಂಡ ಹಾಗೂ ಹಿರಿಯ ಮುತ್ಸದ್ಧಿ ನಂದ ಕುಮಾರ್ ಸಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿಗೆ ಇದು ದೊಡ್ಡ ಹೊಡೆತವಾಗಿದೆ. ಆತ್ಮಗೌರವಕ್ಕೆ ಆದ್ಯತೆ ನೀಡಿ, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಘೋಷಿಸಿದ್ದಾರೆ.

ಛತ್ತೀಸ್‌ಗಢ ರಾಜ್ಯ ಘೋಷಣೆ ಬಳಿಕ 77 ವರ್ಷ ವಯಸ್ಸಿನ ಸಾಯಿ ವಿರೋಧ ಪಕ್ಷದ ಮುಖಂಡರಾಗಿ ಕಾರ್ಯ ನಿರ್ವಹಿಸಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಿಎಂ ಹುದ್ದೆಯ ರೇಸ್‌ನಲ್ಲಿದ್ದರು. ಇಂಥ ಹಿರಿಯ ಮುಖಂಡ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆಘಾತಕ್ಕೆ ಕಾರಣವಾಗಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಸಾಯಿ, "ಪಕ್ಷದೊಳಗೆಯೇ ನನ್ನ ಘನತೆ ಹಾಗೂ ವರ್ಚಸ್ಸಿಗೆ ಆಗಿರುವ ಧಕ್ಕೆಯ ಹಿನ್ನೆಲೆಯಲ್ಲಿ, ನನ್ನ ಆತ್ಮಗೌರವಕ್ಕೇ ಮೊದಲ ಆದ್ಯತೆ ನಿಡದೇ ನನಗೆ ಬೇರೆ ಆಯ್ಕೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಹೇಗೆ ಪಕ್ಷವನ್ನು ಕಟ್ಟಿ ಬೆಳೆಸಿ ಪಕ್ಷದ ನೇತಾರರಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ಹೇಗೆ ಗೌರವದಿಂದ ಕಾಣುತ್ತಿದ್ದರು ಎನ್ನುವುದನ್ನು ವಿವರಿಸಿದ್ದಾರೆ.

ಸಾಯಿ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿರುವುದಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವೊ ಸ್ಪಷ್ಟಪಡಿಸಿದ್ದಾರೆ. "ಸಾಯಿ ಅವರು ಪಕ್ಷವನ್ನು ರಾಜ್ಯದಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಸಂಪರ್ಕ ಸಾಧ್ಯವಾದಾಗ ತಪ್ಪು ತಿಳಿವಳಿಕೆ ಹೋಗಲಾಡಿಸುವ ಪ್ರಯತ್ನ ಮಾಡುತ್ತೇವೆ: ಎಂದು ಅವರು ಹೇಳಿದ್ದಾರೆ.

share
Next Story
X