IMO ಸೇರಿದಂತೆ 14 ಮೊಬೈಲ್ ಅಪ್ಲಿಕೇಶನ್ ಗಳನ್ನು ನಿಷೇಧಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಪ್ರಮುಖ ಶಿಸ್ತುಕ್ರಮವೊಂದರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ತಮ್ಮ ಬೆಂಬಲಿಗರು ಹಾಗೂ ಓವರ್ ಗ್ರೌಂಡ್ ವರ್ಕರ್ಸ್ (ಒಜಿಡಬ್ಲ್ಯು) ಜೊತೆ ಸಂವಹನ ನಡೆಸಲು ಹಾಗೂ ಪಾಕಿಸ್ತಾನದಿಂದ ಸಂದೇಶಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ. ಮೂಲಗಳು ತಿಳಿಸಿವೆ.
ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್‌ಸ್ವಿಸ್, ವಿಕ್ರಮ್, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಝಾಂಗಿ ಮತ್ತು ಥ್ರೀಮಾ ಸೇರಿವೆ.
ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
Next Story





