Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಬಿಜೆಪಿಗೆ ಮತ್ತೆ ಜನಾದೇಶ:...

ರಾಜ್ಯ ಬಿಜೆಪಿಗೆ ಮತ್ತೆ ಜನಾದೇಶ: ಗೋಪಾಲಕೃಷ್ಣ ಅಗರ್ವಾಲ್ ವಿಶ್ವಾಸ

1 May 2023 3:55 PM IST
share
ರಾಜ್ಯ ಬಿಜೆಪಿಗೆ ಮತ್ತೆ ಜನಾದೇಶ: ಗೋಪಾಲಕೃಷ್ಣ ಅಗರ್ವಾಲ್ ವಿಶ್ವಾಸ

ಮಂಗಳೂರು, ಮೇ 1: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿಗಾಗಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರಕಾರಕ್ಕೆ ಜನಾದೇಶ ಸಿಗಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವನ್ನು 5 ಟ್ರಿಲಿಯನ್ ಡಾಲರ್ ಗಾತ್ರದ ಅರ್ಥವ್ಯವಸ್ಥೆಯನ್ನಾಗಿ ಅಭಿವೃದ್ಧಿಪಡಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಮಹತ್ವಾಕಾಂಕ್ಷೆಗೆ ಸಾಥ್ ನೀಡಲು ರಾಜ್ಯಗಳಲ್ಲಿ ಬಿಜೆಪಿಯ ಸರಕಾರಗಳೇ ಅಧಿಕಾರಕ್ಕೆ ಬರಬೇಕು. ಇತರ ಪಕ್ಷಗಳ ಸರಕಾರಗಳಿದ್ದಲ್ಲಿ ಯೋಜನೆಗಳ ಅನುಷ್ಠಾನ ನನೆಗುದಿಗೆ ಬೀಳಲಿದೆ. ಜನತೆಗೆ ಸೌಲಭ್ಯಗಳು ದೊರಕದಂತಾಗುತ್ತದೆ ಎಂದರು.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಸರಕಾರದಿಂದ ದೊರಕುವ 6,000 ರೂ.ಗೆ ರಾಜ್ಯ ಸರಕಾರವು ಮತ್ತೆ 4,000 ರೂ. ಸೇರಿಸಿ ಕೊಡುತ್ತದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರಾಜ್ಯದಲ್ಲಿ ಶೇ.94ರಷ್ಟು ಅನುಷ್ಠಾನವಾಗಿದ್ದರೆ ಕಮ್ಯುನಿಸ್ಟ್ ಆಡಳಿತವಿರುವ ಕೇರಳದಲ್ಲಿ ಕೇವಲ ಶೇ.56ರಷ್ಟು ಮಾತ್ರ ಜಾರಿಯಾಗಿದೆ. ಅದೇ ರೀತಿ ಹರ್‌ಘರ್ ಜಲ್ ಯೋಜನೆ ಕರ್ನಾಟಕದಲ್ಲಿ ಶೇ.57, ಕೇರಳದಲ್ಲಿ ಶೇ.47, ಬಂಗಾಳದಲ್ಲಿ ಶೇ.32 ಅನುಷ್ಠಾನವಾಗಿದದ್ದರೆ, ಗುಜರಾತ್‌ನಲ್ಲಿ ಶೇ.100ರಷ್ಟು ಅನುಷ್ಠಾನಗೊಂಡಿದೆ ಎಂದು ಗೋಪಾಲಕೃಷ್ಣ ಅಗರ್ವಾಲ್ ತಿಳಿಸಿದರು.

ರಾಜ್ಯದ ಸಿರಿಧಾನ್ಯಗಳನ್ನು ಜಾಗತಿಕ ಮಾರುಕಟ್ಟೆಗೆ ಒಯ್ದಿರುವುದು ಬಿಜೆಪಿ ಸರಕಾರದ ಪ್ರಗತಿಪರ ಕೃಷಿ ನೀತಿಗೆ ಸಾಕ್ಷಿಯಾಗಿದೆ. ಕರಾವಳಿ ಕರ್ನಾಟಕವು ಶಿಕ್ಷಣ, ಬ್ಯಾಂಕಿಂಗ್ ಮತ್ತಿತರ ಕ್ಷೇತ್ರಗಳಲ್ಲಿ ದೇಶದಲ್ಲೇ ನಂ.1 ಆಗಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳನ್ನು ಹೊಂದಿದೆ ಎಂದು ಹೇಳಿದರು.

ನಮ್ಮ ಪ್ರಣಾಳಿಕೆ ಪ್ರಕಾರ ಬಿಪಿಎಲ್ ಕುಟುಂಬಗಳಿಗೆ ಯುಗಾದಿ, ಚೌತಿ ಹಬ್ಬ ಮತ್ತು ದೀಪಾವಳಿಗೆ 3 ಉಚಿತ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಪ್ರತಿವರ್ಷ ಒದಗಿಸಲಿದ್ದೇವೆ. ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯಕರ ಆಹಾರ ಒದಗಿಸಲು ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ರಾಜ್ಯ ಮಾಧ್ಯಮ ಪ್ಯಾನೆಲಿಸ್ಟ್ ಆನಂದ ಗುರುಮೂರ್ತಿ, ಆರ್ಥಿಕ ಪ್ರಕೋಷ್ಟದ ಶಾಂತಾರಾಂ ಶೆಟ್ಟಿ, ರಾಜೇಶ್ ರಾವ್ ಹಾಗೂ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ ಉಪಸ್ಥಿತರಿದ್ದರು.

share
Next Story
X