Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಡಿಪಿಐ, ಎಎಪಿ ಪಕ್ಷಗಳು ಬಿಜೆಪಿಯ...

ಎಸ್‌ಡಿಪಿಐ, ಎಎಪಿ ಪಕ್ಷಗಳು ಬಿಜೆಪಿಯ ಬಿ-ಟೀಮ್: ಜೈರಾಂ ರಮೇಶ್

1 May 2023 10:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಸ್‌ಡಿಪಿಐ, ಎಎಪಿ ಪಕ್ಷಗಳು ಬಿಜೆಪಿಯ ಬಿ-ಟೀಮ್: ಜೈರಾಂ ರಮೇಶ್

ಮಂಗಳೂರು, ಮೇ 1: ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಎಎಪಿ, ಎಸ್‌ಡಿಪಿಐ, ಎಂಐಎಂ, ಜೆಡಿಎಸ್ ಪಕ್ಷಗಳು ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿವೆ. ಹಾಗಾಗಿ ಈ ಎಲ್ಲಾ ಪಕ್ಷಗಳು ಬಿಜೆಪಿಯ ಬಿ-ಟೀಂಗಳಾಗಿವೆ ಎಂದು ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಯಾವುದೇ ವಿಧದ ಕೋಮುವಾದವನ್ನೂ ಎಂದಿಗೂ ಸಹಿಸುವುದಿಲ್ಲ. ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಕೂಡ ಇದನ್ನು ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಶಕ್ತಿಮೀರಿ ಶ್ರಮಿಸುತ್ತಿದೆ. ಈ ಸಂದರ್ಭ ಕಾಂಗ್ರೆಸ್ ಜೊತೆ ಕೈ ಜೋಡಿಸಬೇಕಾದ ಎಎಪಿ, ಎಸ್‌ಡಿಪಿಐ ಮತ್ತಿತರ ಪಕ್ಷಗಳು ಬಿಜೆಪಿಗೆ ಅನುಕೂಲವಾಗುವಂತೆ ಕಾರ್ಯಾಚರಿಸುತ್ತಿವೆ ಎಂದರು.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶದಲ್ಲೂ ಈ ಭರವಸೆ ನೀಡಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಅಲ್ಲಿ ಯಾವುದೇ ಕುಟುಂಬಕ್ಕೂ ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ಸಿಕ್ಕಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಹಿಮಾಚಲ ಪ್ರದೇಶ ಹಾಗೂ ಛತ್ತೀಸ್ಗಡದ ಚುನಾವಣೆಯಲ್ಲಿ ಪಕ್ಷವು ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಿವೆ. ರಾಜಸ್ಥಾನದಲ್ಲಿ ಎಲ್ಲ ನಾಗರಿಕರಿಗೂ ಆರೋಗ್ಯ ವಿಮೆ ಮಾಡಿಸಿದೆ. 25 ಲಕ್ಷ ರೂ.ವರೆಗೆ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಹಿಮಾಚಲ ಪ್ರದೇಶ ಮತ್ತು ಛತ್ತೀಸಗಡದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಜೈರಾಂ ರಮೇಶ್ ಹೇಳಿದರು.

ರಾಜ್ಯಕ್ಕೆ ಕೇಂದ್ರದಿಂದ ಸಿಗುವ ತೆರಿಗೆಯ ಪಾಲು ತುಂಬಾ ಕಡಿಮೆ. ಕರ್ನಾಟಕದ ಅಭಿವೃದ್ಧಿಗೆ ಬಳಕೆಯಾಗುವ ಶೇ.94ರಷ್ಟು ವರಮಾನ ರಾಜ್ಯದಲ್ಲೇ ಉತ್ಪತ್ತಿಯಾಗುತ್ತದೆ. ಹಾಗಾಗಿ ಡಬಲ್ ಇಂಜಿನ್ ಸರಕಾರದಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನ ಇಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದ ಡಾ. ಅಜಯ್ ಕುಮಾರ್, ಪಕ್ಷದ ಮುಖಂಡರಾದ ಜಿ.ಎ.ಬಾವ, ಎ.ಸಿ.ವಿನಯರಾಜ್, ಅಡ್ವಕೇಟ್ ಮನೋರಾಜ್, ಪದ್ಮಪ್ರಸಾದ್ ಜೈನ್, ಜೋಕಿಂ ಡಿಸೋಜ, ಶುಭೋದಯ ಆಳ್ವ, ಲಾವಣ್ಯಾ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X