Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮ್ಮ ಕುಟುಂಬದ ಸ್ಥಿತಿ, ಬೆಲೆ ಏರಿಕೆ...

ನಿಮ್ಮ ಕುಟುಂಬದ ಸ್ಥಿತಿ, ಬೆಲೆ ಏರಿಕೆ ನೋಡಿ ಮತ ಹಾಕಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

1 May 2023 6:45 PM IST
share
ನಿಮ್ಮ ಕುಟುಂಬದ ಸ್ಥಿತಿ, ಬೆಲೆ ಏರಿಕೆ ನೋಡಿ ಮತ ಹಾಕಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಬೆಂಗಳೂರು, ಮೇ.1:ಕರ್ನಾಟಕ ರಾಜ್ಯದ ಮತದಾರರು ಮತದಾನ ಮಾಡಲು ಹೋದಾಗ ನಿಮ್ಮ ಕುಟುಂಬದ ಸ್ಥಿತಿ, ಬೆಲೆ ಏರಿಕೆ, ದುಬಾರಿ ಆರೋಗ್ಯ ಸೇವೆ ಬಗ್ಗೆ ಆಲೋಚಿಸಿ ಮತ ಹಾಕಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ನಿಮ್ಮ ಪ್ರತಿಯೊಂದು ಮತವು ಬೆಲೆ ಏರಿಕೆ ಸೇರಿದಂತೆ ಸಾಮಾಜಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ಶಕ್ತಿ ತುಂಬಿದಂತಾಗಲಿದೆ ಎಂದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಆರು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ತಾನು ಚುನಾವಣೆಗೂ ಮುನ್ನ ನೀಡುವ ಭರವಸೆಗಳನ್ನು ಈಡೇರಿಸುವ ಪಕ್ಷ ಎಂದರೆ ಕಾಂಗ್ರೆಸ್. ಕಾಂಗ್ರೆಸ್ ಪಕ್ಷದ ಈ ಯೋಜನೆಗಳು ಬಿಜೆಪಿಯ ನಿದ್ದೆಗೆಡಿಸಿದೆ ಎಂದರು.

ಅಲ್ಲದೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ತಾನು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ತೋರಿಸಿದೆ. ಸುಳ್ಳಿನ ಪಕ್ಷವಾಗಿರುವ ಬಿಜೆಪಿಗೆ ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ನೋಡಿ ಸಹಿಸಲಾಗುತ್ತಿಲ್ಲ. ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಗಂಗಾ ನದಿ ಶುಚಿ, ಬುಲೆಟ್ ರೈಲು ಆರಂಭ, ಎಲ್ಲರ ಖಾತೆಗೆ 15 ಲಕ್ಷ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂಬ ಸುಳ್ಳನ್ನು ಹೇಳಿ ಅಧಿಕಾರಕ್ಕೆ ಬಂದಿತ್ತು. ಆದರೆ ಅವರ ಎಲ್ಲಾ ಭರವಸೆಗಳು ಕೇವಲ ಗಿಮಿಕ್ ಆಗಿದ್ದವು ಎಂದು ಹೇಳಿದರು.

ಬಿಜೆಪಿಯ ಈ ಸುಳ್ಳಿನ ಭರವಸೆಗಳಿಂದ ಬೇಸತ್ತಿರುವ ಜನರು ಈಗ ಜಾಗೃತರಾಗಿದ್ದಾರೆ. ರಾಜಸ್ಥಾನದ ಬಿಕನೇರ್ ನಿಂದ ಬೆಂಗಳೂರಿನವರೆಗೆ, ಉದಯಪುರದಿಂದ ಉಡುಪಿವರೆಗೆ ಬಿಜೆಪಿಯ ಸುಳ್ಳಿನ ಭರವಸೆಗಳಿಂದ ಹತಾಶರಾಗಿದ್ದಾರೆ. ಈಗ ಕರ್ನಾಟಕ ರಾಜ್ಯದ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪ್ರಗತಿ ಬೇಕಾಗಿದೆಯೇ ಹೊರತು ಬಿಜೆಪಿಯ ದ್ರೋಹವಲ್ಲ ಎಂದು ಅವರು ತಿಳಿಸಿದರು.

ಐದು ವರ್ಷಗಳ ಆಡಳಿತ ಮಾಡಿರುವ ಬಿಜೆಪಿ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿ ಬಗ್ಗೆ ತಿಳಿಯಲು ರಾಜಸಥಾನದ ಕರೆ ತಿರುಗಿ ನೋಡುತ್ತಾರೆ. ಸಾಮಾಜಿಕ ಭದ್ರತೆ ಮತ್ತು ಮಹಿಳೆಯರ ಸಬಲೀಕರಣ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ದೂರದೃಷ್ಠಿಯಾಗಿದೆ.

ಇಂದಿರಾ ಗಾಂಧಿ ಗ್ಯಾಸ್ ಸಿಲಿಂಡರ್ ಯೋಜನೆ ಮೂಲಕ 500 ರೂ.ಗೆ ಸಿಲಿಂಡರ್ ನೀಡಿದ ದೇಶದ ಮೊದಲ ರಾಜ್ಯ ರಾಜಸ್ಥಾನವಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಹೊರೆ ಇಳಿಸಲು ಪ್ರತಿ ತಿಂಗಳು ಪ್ರತಿ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ ನೀಡಲಿದೆ.

ರಾಜಸ್ಥಾನದಲ್ಲಿ 100 ಯುನಿಟ್ ಮನೆಬಳಕೆಗೆ ಹಾಗೂ 2 ಸಾವಿರ ಯುನಿಟ್ ಕೃಷಿ ಉದ್ದೇಶಕ್ಕೆ ಉಚಿತವಾಗಿ ನೀಡಲಾಗಿದ್ದು, ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ಪ್ರತಿ ತಿಂಗಳು ನೀಡಲಾಗುವುದು. 

ರಾಜಸ್ಥಾನದಲ್ಲಿ 1 ಕೋಟಿ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಉದ್ದೇಶದಿಂದ ಪಿಂಚಣಿ ನೀಡುತ್ತಿದ್ದು, ಅದೇ ರೀತಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಸಿಕ ಪಿಂಚಣಿಯನ್ನು ಅಗತ್ಯ ಫಲಾನುಭವಿಗಳಿಗೆ ನೀಡಲಿದೆ ಎಂದು ವಿವರಿಸಿದರು.

share
Next Story
X