ಶಿವಮೊಗ್ಗ: ಕಾಲೇಜಿನ ಹಾಸ್ಟೆಲ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಯಲ್ಲಿ ವರದಿಯಾಗಿದೆ.
ಅಭಯ್ ರೆಡ್ಡಿ(22) ಮೃತ ಯುವಕ.ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ಅಭಯ ರೆಡ್ಡಿ ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.ಬೆಂಗಳೂರಿನ ಬೊಮ್ಮಸಂದ್ರ ನಿವಾಸಿಯಾಗಿರುವ ಅಭಯ್ ವಿದ್ಯಾಭ್ಯಾಸಕ್ಕೆಂದು ಸುಬ್ಬಯ್ಯ ಕಾಲೇಜು ಸೇರಿದ್ದ.
ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
Next Story





