ಐಪಿಎಲ್-2023: ಲಕ್ನೋ ತಂಡಕ್ಕೆ ಸೋಲುಣಿಸಿದ ಆರ್‌ಸಿಬಿ

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಾಟದಲ್ಲಿ ಆರ್‌ಸಿಬಿ ತಂಡವು 18 ರನ್ ಗಳ ಜಯಗಳಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ತಂಡ ಮಧ್ಯದಲ್ಲಿ ಮಳೆಯ ಅಡಚಣೆಗೆ ಒಳಗಾದರೂ ನಾಯಕ ಡುಪ್ಲೆಸಿಸ್ 44 ರನ್ ಹಾಗೂ ವಿರಾಟ್ ಕೊಹ್ಲಿ 31 ರನ್ ಗಳ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತ್ತು. ಲಕ್ನೋ ತಂಡದ ಪರ ನವೀನ್ ಉಲ್ ಹಕ್ 3 ವಿಕೆಟ್ ಹಾಗೂ ರವಿ ಬಿಷ್ಣೋಯಿ ಮತ್ತು ಅಮಿತ್ ಮಿಶ್ರಾ ತಲಾ 2 ವಿಕೆಟ್ ಪಡೆದು ಮಿಂಚಿದರು.
ಈ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲಗೊಂಡ ಲಕ್ನೋ ತಂಡವು 108 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಕೆಎಲ್ ರಾಹುಲ್ ಗಾಯಗೊಂಡಿದ್ದು ತಂಡಕ್ಕೆ ಆಘಾತ ನೀಡಿದೆ.
Next Story