Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಜರಂಗದಳ, ಪಿಎಫ್ಐ ನಿಷೇಧ: ಕಾಂಗ್ರೆಸ್​ನ...

ಬಜರಂಗದಳ, ಪಿಎಫ್ಐ ನಿಷೇಧ: ಕಾಂಗ್ರೆಸ್​ನ ಪ್ರಣಾಳಿಕೆಯಲ್ಲಿ ಭರವಸೆ

ಪ್ರಮುಖ ಭರವಸೆಗಳು ಇಂತಿವೆ

2 May 2023 10:29 AM IST
share
ಬಜರಂಗದಳ, ಪಿಎಫ್ಐ ನಿಷೇಧ: ಕಾಂಗ್ರೆಸ್​ನ ಪ್ರಣಾಳಿಕೆಯಲ್ಲಿ ಭರವಸೆ
ಪ್ರಮುಖ ಭರವಸೆಗಳು ಇಂತಿವೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ನಗರದ ಹೋಟೆಲ್ ಒಂದರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ ಜಿ ಪರಮೇಶ್ವರ ಮತ್ತಿತರ ಮುಖಂಡರು ಪ್ರಣಾಳಿಕೆ ಬಿಡುಗಡೆಗೊಳಿಸಿದರು. 

‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಎನ್ನುವ ಹೆಸರಿನಲ್ಲಿರುವ ಪ್ರಣಾಳಿಕೆಯಲ್ಲಿ 'ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಚಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಬಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಪ್ರಮುಖ ಭರವಸೆಗಳು ಇಂತಿವೆ...

-ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​

-ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ

-ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.

-ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು

-ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.

-ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ

-ಆಶಾ ಕಾರ್ಯಕರ್ತೆಯರ ಗೌರವ ಧನವನ್ನು 5000 ರೂ.ದಿಂದ 8000ಕ್ಕೆ ಏರಿಕೆ 

-ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ

-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ

-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ

-ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ

-ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ

-ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ

-ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ

-ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ

-ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ

-ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ

-ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ

-ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ

share
Next Story
X