ಗಂಗಾಕಲ್ಯಾಣ ಯೋಜನೆಯಲ್ಲಿ 500 ಕೋಟಿ ರೂ. ಭ್ರಷ್ಟಾಚಾರ: ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ರಾಜ್ಯ ಸರ್ಕಾರ ಅಭಿವೃದ್ದಿ ಕಾರ್ಯ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಭ್ರಷ್ಟಾಚಾರ ತಾರಕ್ಕಕ್ಕೇರಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಸಂಕನೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದ ಅವರು ಗಂಗಾ ಕಲ್ಯಾಣ ಯೋಜನೆಯಲ್ಲಿ ಬಿಜೆಪಿ ಸರಕಾರ ಬಡವರ ಜಮೀನುಗಳಲ್ಲಿ ಬೋರ್ ವೆಲ್ ಕೊರೆಸುವ ಬದಲು ಸುಮಾರು 500 ಕೋಟಿ ರೂ. ಅವ್ಯವಹಾರ ಮಾಡಿದೆ. ಭ್ರಷ್ಟಾಚಾರಕ್ಕೆ ತೀಲಾಂಜಲಿ ಇಡಬೇಕಾದರೆ ನೀವೆಲ್ಲ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
'ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ' ಎಂದು ಘೋಷಿಸಿದ ಪ್ರಿಯಾಂಕ್ ಖರ್ಗೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಅವನು ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ. ಅಂಥವರನ್ನು ಬಿಜೆಪಿ ಶಾಸಕನನ್ನಾಗಿ ಮಾಡ ಹೊರಟಿದೆ. ನೀವೆಲ್ಲ ಸೇರಿ ಅವರಿಗೆ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.
ವೇದಿಕೆಯ ಮೇಲೆ ಭಾಗನಗೌಡ ಸಂಕನೂರು, ಭೀಮಣ್ಣ ಸಾಲಿ, ನಾಗರೆಡ್ಡಿ ಪಾಟೀಲ ಕರದಾಳ ಸೇರಿದಂತೆ ಹಲವರಿದ್ದರು.








