Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ...

ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ: ರಾಹುಲ್ ಗಾಂಧಿ

2 May 2023 5:21 PM IST
share
ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ: ರಾಹುಲ್ ಗಾಂಧಿ

ಶಿವಮೊಗ್ಗ, ಮೇ 2: ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿ ಇದೆ. ಹಾಗಾಗಿ ಅವರಿಗೆ 40 ಸೀಟು ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಮಂಗಳವಾರ ತೀರ್ಥಹಳ್ಳಿ ಪಟ್ಟಣದ ಬಾಳೇಬೈಲಿನಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು,ಬಿಜೆಪಿ ಕಳ್ಳತನದ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆ ಮಾಡಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ. ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ. ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತೇನೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ. ಗೃಹ ಸಚಿವರು ಪೊಲೀಸ್ ನೇಮಕಾತಿಯ ಹಗರಣದಲ್ಲಿದ್ದಾರೆ. ಪ್ರಧಾನಿ ಮೋದಿ ಕೇವಲ ಮೋದಿ ಬಗ್ಗೆ ಮಾತ್ರ ಮಾತನಾಡುತ್ತಾರೆ. ಗೃಹ ಸಚಿವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಇಲ್ಲ. ರಾಜ್ಯ ಸರ್ಕಾರ ಕಳ್ಳ ಸರ್ಕಾರವಾಗಿದೆ ಎಂದರು.

ಏಕೆಂದರೆ ಕಳೆದ 2 ವರ್ಷದ ಹಿಂದೆ ಬಂದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಹಾಗಾಗಿ ಮೋದಿಯವರು ಯಡಿಯೂರಪ್ಪ, ಬೊಮ್ಮಾಯಿ ಹಾಗೂ ಗೃಹ ಸಚಿವರ ಹೆಸರನ್ನೇ ಹೇಳುವುದಿಲ್ಲ ಎಂದರು.

ಮಹಾದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಬಿಜೆಪಿ ಸರ್ಕಾರ ಏನು ಮಾಡಿತು. ಇಲ್ಲಿಂದ ತೆರಿಗೆ ರೂಪದಲ್ಲಿ ಪಡೆದ ಹಣ ಎಲ್ಲಿ ಹೋಯಿತು. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿಗೆ ಪತ್ರ ಬರೆದರೂ ಏಕೆ ಉತ್ತರವಿಲ್ಲ. ವಿಐಎಸ್ ಎಲ್ ಕಾರ್ಖಾನೆ ಉಳಿಸಲು ಏನು ಮಾಡಿದ್ದೀರಾ ಎಂದೆಲ್ಲಾ ಪ್ರಶ್ನಿಸಿದರು.

ಇದೇ ಮೊದಲ ಬಾರಿಗೆ ರೈತರು ತೆರಿಗೆ ನೀಡುವ ಪರಿಸ್ಥಿತಿ ಬಂದಿದೆ. ಸಿಲಿಂಡರ್, ಪೆಟ್ರೋಲ್-ಡೀಸಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶದ ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ. ನಿರುದ್ಯೋಗ ಮತ್ತು ಬಡತನದ ಪ್ರಮಾಣ ಹೆಚ್ಚಾಗಿದೆ.  ಇದಕ್ಕಾಗಿ ನಾವು 5 ಯೋಜನೆಯನ್ನು ಜಾರಿಗೆ ತರುವ ಭರವಸೆ ನೀಡಿದ್ದೇವೆ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಪರಿಣಾಮ ಮಹಿಳೆಯರಿಗೆ ಕಷ್ಟವಾಗುತ್ತಿದೆ. ಅದಕ್ಕಾಗಿ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ ಗ್ಯಾರಂಟಿ ನೀಡಲಿದ್ದೇವೆ. ಇದನ್ನು ಮೊದಲ ದಿನವೇ ಜಾರಿಗೆ ತರಲಿದ್ದೇವೆ ಎಂದು ಹೇಳಿದರು.

ರೈತರಿಗೆ ಪ್ರತಿ ವರ್ಷಕ್ಕೆ 30 ಸಾವಿರ ಕೋಟಿ ನೆರವು ನೀಡಲಿದ್ದೇವೆ. ಅಡಿಕೆ, ತೆಂಗು ಬೆಳೆಗಾರರಿಗೆ ನೆರವು, ಹಾಲಿಗೆ ಸಬ್ಸಿಡಿ ನೀಡಲಿದ್ದೇವೆ. ನಾವು 91 ಸಲ ದೋಷಿಸಿದ್ದೇವೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಇಲ್ಲಿನ ಲಂಚ, ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ ಎಂದರು.

ನೀವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೀರಾ ಎಂದು ಹೇಳಿ. 40 ಪರ್ಸೆಂಟ್ 50 ಪರ್ಸೆಂಟ್ ಗೆ ಹೆಚ್ಚಿಸುತ್ತಿರಾ. ಈ ಭೂಮಿಯಲ್ಲಿ ಕೇವಲ ಮೋದಿ ಮಾತ್ರ ಇಲ್ಲ. ಸಾಮಾನ್ಯ ಜನರೂ ಇದ್ದಾರೆ. ಹಾಗಾಗಿ ಅವರ ಬಗ್ಗೆ ಮಾತನಾಡಿ ಎಂದು ಹೇಳಿದರು.

ಇಲ್ಲಿನ ಯುವಕರು, ಮಹಿಳೆಯರು, ರೈತರು ಮೊದಲಾದವರ ಬಗ್ಗೆ ಮಾತನಾಡಿ ಇನ್ನು ಮುಂದಾದರೂ ನಿಮ್ಮ ಭಾಷಣದಲ್ಲಿ ಶೇ.70 ನಿಮ್ಮ ಬಗ್ಗೆ ಶೇ. 30 ರಷ್ಟು ಜನರ ಬಗ್ಗೆ ಮಾತನಾಡಿ ಎಂದರು.

ನಟ ಡಾ. ಶಿವರಾಜ್ ಕುಮಾರ್ ಮಾತನಾಡಿ, ನಾನು ರಾಹುಲ್ ಗಾಂಧಿ ನೋಡಲೆಂದು ಬಂದಿದ್ದೇನೆ. ಅವರ ಫಿಟ್ನೆಸ್ ಕಂಡರೆ ಇಷ್ಟ. ನನ್ನ ಮಾವ ಬಂಗಾರಪ್ಪ ಕೂಡ ರಾಜಕಾರಣದಲ್ಲಿದ್ದರು. ಯಾರನ್ನು ಆಯ್ಕೆ ಮಾಡಬೇಕು ಎಂದು ಜನರಿಗೆ ಗೊತ್ತು. ಒಳ್ಳೆಯವರಿಗೆ ಆಶೀರ್ವಾದ ಮಾಡಿ ಎಂದರು.

ಸಭೆಯಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್,ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್, ಆರ್ ಎಂ ಮಂಜುನಾಥ್ ಗೌಡ, ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧು ಬಂಗಾರಪ್ಪ, ಸೇರಿ ಹಲವರು ಉಪಸ್ಥಿತರಿದ್ದರು.

ಮಿಡಿಯಾ ಗ್ಯಾಲರಿಯಲ್ಲಿ ಕುಳಿತ ಕಿಮ್ಮನೆ ರತ್ನಾಕರ್!

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರಾಹುಲ್ ಗಾಂಧಿಯವರ ಜೊತೆ ವೇದಿಕೆ ಹಂಚಿಕೊಳ್ಳಲಿಲ್ಲ.

ವೇದಿಕೆ ಮುಂಭಾಗದಲ್ಲಿ ಇದ್ದ ಮೀಡಿಯಾ ಗ್ಯಾಲರಿಯಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಿದರು. ಚುನಾವಣಾ ನೀತಿ ಸಂಹಿತೆ ಕಾರಣ ಕಿಮ್ಮನೆ ವೇದಿಕೆ ಮೇಲೆ ಏರಲಿಲ್ಲ ಎಂದು ಹೇಳಲಾಗುತ್ತಿದೆ.

share
Next Story
X