Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ...

​ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ

2 May 2023 6:51 PM IST
share
​ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ಉಡುಪಿ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಹಲವು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತಿದ್ದು, ಇದೀಗ ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ.

ಸ್ವೀಪ್ ಸಮಿತಿಯ ಕಾರ್ಯಕ್ರಮಗಳ ಮಾಹಿತಿಗೆಂದೇ ರೂಪಿಸಿರುವ ಇ-ಪತ್ರಿಕೆಯಲ್ಲಿ ಚುನಾವಣೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ಎಂಬ ವಿಷಯದ ಬಗ್ಗೆ, ಪ್ರಜ್ಞಾವಂತರಿಗೊಂದು ಸವಾಲ್  ಎಂಬ ಕುತೂಹಲಕಾರಿ ಪ್ರಶ್ನೆ ಗಳನ್ನು ಒಳಗೊಂಡ ರಸಪ್ರಶ್ನೆ ಕಾರ್ಯಕ್ರಮವನ್ನು  ನಡೆಸಲಾಗುತ್ತಿದೆ.

ಈ ರಸ ಪ್ರಶ್ನೆ  ಸ್ಪರ್ಧೆಯಲ್ಲಿ ಭಾಗವಹಿಸುವವರು ಪ್ರತಿದಿನ ಸಂಜೆ  6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಮುಂದಿನ  ಗೂಗಲ್ ಲಿಂಕ್ -https://forms.gle/pCShAi46G1qEAfxA9-ನಲ್ಲಿ ಇರುವ  ಫಾರ್ಮ್ ನ್ನು ಕ್ಲಿಕ್ ಮಾಡಿ, ತಮ್ಮ ಉತ್ತರಗಳನ್ನು, ಪೂರ್ಣ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಉತ್ತರಿಸಬೇಕು.

ಈ ಸ್ಪರ್ಧೆಯಲ್ಲಿ ಪ್ರತಿದಿನ ಚುನಾವಣೆಗೆ ಸಂಬಂಧಿಸಿದ 5 ಪ್ರಶ್ನೆಗಳನ್ನು, ಬಹು ಆಯ್ಕೆಯ ಉತ್ತರಗಳನ್ನು  ನೀಡುವುದರ ಮೂಲಕ ಕೇಳಲಾಗುವುದು ಹಾಗೂ ಮರುದಿನ 5 ಹೊಸ ಪ್ರಶ್ನೆಗಳೊಂದಿಗೆ ಹಿಂದಿನ ದಿನದ  ಪ್ರಶ್ನೆಗಳಿಗೆ ಸರಿ ಉತ್ತರ ಪ್ರಕಟಿಸಲಾಗುತ್ತದೆ. ಆಯ್ದ ವಿಜೇತರನ್ನು ಪ್ರತಿ ರವಿವಾರದ ಇ-ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

ಅವಿರೋಧವಾಗಿ ಆಯ್ಕೆಯಾದ ಏಕೈಕ ರಾಷ್ಟ್ರಪತಿ ಯಾರು?,  ರಾಷ್ಟ್ರಪತಿ ಚುನಾವಣೆಯಲ್ಲಿ ಯಾರು ಮತದಾನ ಮಾಡಲು ಅರ್ಹರಲ್ಲ?,  ಒಂದು ರಾಜ್ಯ ಹೊಂದಿರಬಹುದಾದ ಕನಿಷ್ಠ ವಿಧಾನ ಸಭಾ ಸದಸ್ಯರ ಸಂಖ್ಯೆ ಎಷ್ಟು?, ಗರಿಷ್ಠ  ಧಾನಸಭಾ ಸದಸ್ಯರ ಸಂಖ್ಯೆ ಎಷ್ಟು?, ಯಾವ ಕಾರಣಕ್ಕೆ ಕ್ರಿಟಿಕಲ್ ಮತಗಟ್ಟೆ ಎಂದು ಗುರುತಿಸಲಾ ಗುತ್ತದೆ?, ಒಂದು ಮತಗಟೆಯಲ್ಲಿ ಇರಬಹುದಾದ ಗರಿಷ್ಠ ಮತದಾರರು ಎಷ್ಟು?, ಮತಯಂತ್ರದಲ್ಲಿನ ನಿಯಂತ್ರಣ ಕೋಶವು  ಎಷ್ಟು ಅವಧಿಯವರೆಗೆ ಮತದಾನದ ಫಲಿತಾಂಶ ವನ್ನು ದಾಖಲಿಸಿಟ್ಟುಕೊಳ್ಳಬಹುದು?  ಅಂಚೆ ಮತ ದಾನ ಎಂದರೆ ಏನು?, ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಎಷ್ಟು ನಾಮಪತ್ರ ಸಲ್ಲಿಸಬಹುದು?, ಯಾವ ಪೋರ್ಟಲ್‌ನಲ್ಲಿ ಅಭ್ಯರ್ಥಿ ನಾಮಪತ್ರ ಸಲ್ಲಿಸಬಹುದು?. 

ಇವೇ ಮುಂತಾದ ಕುತೂಹಲಕಾರಿ ಮತ್ತು ಆಶ್ಚರ್ಯಕಾರವಾದ ಪ್ರಶ್ನೆಗಳನ್ನು  ಕೇಳುವ ಮೂಲಕ ಸಾರ್ವಜನಿ ಕರು, ಚುನಾವಣೆ ಪ್ರಕ್ರಿಯೆಗಳ ಬಗ್ಗೆ ತಿಳಿಯಲು, ತಮ್ಮ ಮತದಾನದ ಮಹತ್ವವನ್ನು ಅರಿಯಲು ಹಾಗೂ ಚುನಾವಣೆ ಕುರಿತ ಹಲವು ಗೊಂದಲಗಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಉತ್ತರ ಪಡೆಯ ಬಹುದಾಗಿದೆ.

ಮತದಾನ ದಿನವಾದ ಮೇ 10 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ಪ್ರಸ್ತುತ ಪ್ರತಿದಿನ ಸುಮಾರು 500ಕ್ಕೂ ಅಧಿಕ ಮಂದಿ ಭಾಗವಹಿಸಿ ತಮ್ಮ ಉತ್ತರಗಳನ್ನು ನೀಡುತ್ತಿದ್ದು, ಪ್ರತಿದಿನದ ಕುತೂಹಲಕಾರಿ ಪ್ರಶ್ನೆಗಳು ಮತ್ತು ಉತ್ತರಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನು ಅಪಾರವಾಗಿ  ಆರ್ಕಸುತ್ತಿವೆ. ದಿನೇ ದಿನೇ ಭಾಗವಹಿಸುವ ಸ್ಪರ್ಧಿಗಳ ಸಂಖ್ಯೆ ಅಧಿಕವಾಗುತ್ತಿದ್ದು, ರಸಪ್ರಶ್ನೆಗಳ ಎಲ್ಲಾ ಕಂತುಗಳು ಮುಗಿದ ನಂತರ  ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎಲ್ಲಾ ವಿಜೇತರಿಗೆ ಆಕರ್ಷಕ ಬಹುಮಾನ ವಿತರಿಸಲಾಗುತ್ತದೆ.

"ಜಿಲ್ಲೆಯ ಸ್ವೀಪ್ ಕಾರ್ಯಕ್ರಮಗಳ ಮಾಹಿತಿ ನೀಡಲೆಂದು ರೂಪಿಸಿರುವ ಇ-ಪತ್ರಿಕೆಯನ್ನು ಪ್ರತಿದಿನ  ೨ ಲಕ್ಷಕ್ಕೂ ಅಧಿಕ ಮಂದಿಗೆ ತಲುಪಿಸಲಾ ಗುತ್ತಿದ್ದು, ಇ-ಪತ್ರಿಕೆಯಲ್ಲಿ ಮತದಾನ ಜಾಗೃತಿಗಾಗಿ ಆರಂಭಿಸಿರುವ ರಸಪ್ರಶ್ನೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತಿದೆ. ದಿನೇ ದಿನೇ ಸ್ಪರ್ಧೆಯಲ್ಲಿ ಭಾಗವಹಿ ಸುವ ಮತ್ತು ವಿಜೇತರಾಗುವವರ ಸಂಖ್ಯೆ ಸಹ ಅಧಿಕವಾಗುತ್ತಿದೆ. ಮತದಾರರು ಮತದಾನ ಪ್ರಕ್ರಿಯೆಯ ಹಲವು ಕುತೂಹಲ ವಾದ ಅಂಶಗಳನ್ನು ತಿಳಿದು, ತಮ್ಮ ಅಮೂಲ್ಯಮತದ ಮಹತ್ವ ಅರಿಯಲು ಮತ್ತು ಮೇ 10ರಂದು ನಡೆಯುವ ಮತದಾನದಲ್ಲಿ ತಪ್ಪದೇ ಭಾಗವಹಿಸಲು ಇದು ಪ್ರೇರಣೆ ನೀಡಲಿದೆ".

-ಪ್ರಸನ್ನ ಹೆಚ್, ಅಧ್ಯಕ್ಷರು ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಪಂ ಸಿಇಓ.

share
Next Story
X