ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಪ್ರತಿ ಸುಟ್ಟು ಬಜರಂಗದಳ ಕಾರ್ಯಕರ್ತರು ಆಕ್ರೋಶ

ಉಡುಪಿ, ಮೇ 2: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಪ್ರಸ್ತಾಪವನ್ನು ಖಂಡಿಸಿ ಬಜರಂಗದಳದ ಕಾರ್ಯಕರ್ತರು ಇಂದು ಉಡುಪಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಬಜರಂಗದಳ ರಾಜ್ಯ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ದರೆ ಬಜರಂಗ ದಳವನ್ನು ನಿಷೇಧ ಮಾಡಿ ತೋರಿಸ ಬೇಕು. ಆಗ ನಮ್ಮ ಶಕ್ತಿ ಏನೂ ಎಂಬುದನ್ನು ತೋರಿಸುತ್ತೇವೆ. ನಾವು ದೇಶ, ಧರ್ಮದ ರಕ್ಷಣೆಗಾಗಿ ಸಂಘರ್ಷ ಮಾಡಿಕೊಂಡು ಬಂದಿದ್ದೇವೆ. ಸ್ವಾಭಿಮಾನಿ ಕಾರ್ಯಕರ್ತರ ಪಡೆಯನ್ನು ಕೆಣಕಿದರೆ ಸುಮ್ಮನೆ ಕೂರುವುದಿಲ್ಲ. ಕೂಡಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಮೇ 10ರಂದು ಸೂಕ್ತ ಉತ್ತರ ಕೊಡಲಾಗುವುದು ಎಂದು ಎಚ್ವರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಜರಂಗದಳದ ಪ್ರಮುಖರಾದ ಭುಜಂಗ ಕುಲಾಲ್, ಪುನೀತ್ ಅತ್ತಾವರ, ನವೀನ್ ಮೂಡುಶೆಡ್ಡೆ, ಚೇತನ್ ಪೆರಲ್ಕೆ, ವಿಎಚ್‌ಪಿ ಮುಖಂಡ ದಿನೇಶ್ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.
Next Story