Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಅಧಿಕಾರಕ್ಕೆ ಬಂದರೆ ಆನ್‍ಲೈನ್...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಆನ್‍ಲೈನ್ ಬೆಟ್ಟಿಂಗ್ ದಂಧೆ ಬಂದ್: ಎಚ್.ಡಿ.ಕುಮಾರಸ್ವಾಮಿ

''ಹಳ್ಳಿ ಮಕ್ಕಳನ್ನು ಹಾಳು ಮಾಡುತ್ತಿರುವ ಅನಿಷ್ಟಗಳನ್ನು ತೊಲಗಿಸುವೆ''

2 May 2023 8:36 PM IST
share
ಜೆಡಿಎಸ್ ಅಧಿಕಾರಕ್ಕೆ ಬಂದರೆ ಆನ್‍ಲೈನ್ ಬೆಟ್ಟಿಂಗ್ ದಂಧೆ ಬಂದ್: ಎಚ್.ಡಿ.ಕುಮಾರಸ್ವಾಮಿ
''ಹಳ್ಳಿ ಮಕ್ಕಳನ್ನು ಹಾಳು ಮಾಡುತ್ತಿರುವ ಅನಿಷ್ಟಗಳನ್ನು ತೊಲಗಿಸುವೆ''

ರಾಯಚೂರು, ಮೇ 2: ‘ಬೆಟ್ಟಿಂಗ್ ದಂಧೆಯಿಂದಾಗಿ ಹಳ್ಳಿಯ ಮಕ್ಕಳು ಬೀದಿಪಾಲಾಗುತ್ತಿದ್ದಾರೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಆನ್‍ಲೈನ್ ಬೆಟ್ಟಿಂಗ್ ದಂಧೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ  ಭರವಸೆ ನೀಡಿದ್ದಾರೆ.

ಮಂಗಳವಾರ ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಸಿದ್ದುಬಂಡಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಬೆಟ್ಟಿಂಗ್ ಇತ್ಯಾದಿ ದಂಧೆಗಳಿಂದ ಬಡವರ ಮಕ್ಕಳು, ಹಳ್ಳಿಯ ಮಕ್ಕಳು ಹಾಳಾಗುತ್ತಿದ್ದಾರೆ. ಶೈಕ್ಷಣಿಕವಾಗಿ ಅವರ ಭವಿಷ್ಯವನ್ನು ಭದ್ರ ಮಾಡಬೇಕಿದೆ. ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಇಂಥ ಅನಿಷ್ಟಗಳನ್ನು ತೊಳಗಿಸುತ್ತೇನೆ’ ಎಂದು ನುಡಿದರು.

‘ಈ ಹಿಂದೆ ತಾಯಂದಿರು ಸಾರಾಯಿ ನಿಷೇಧ ಮಾಡಿ ಎಂದಿದ್ದರು. ಅವರ ಕಷ್ಟಕ್ಕೆ ಪರಿಹಾರವಾಗಿ ಸಾರಾಯಿ ನಿಷೇಧ ಮಾಡಿದೆ. ಒಂದಂಕಿ ಲಾಟರಿ ನಿಷೇಧ ಮಾಡಿದೆ. ನಾನು ಸರಕಾರ ಮಾಡಿದ ಸಂದರ್ಭದಲ್ಲಿ ತಾಯಂದಿರು, ಅಕ್ಕತಂಗಿಯರ ಬೇಡಿಕೆ ಈಡೇರಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ನಾನು ಕೇವಲ ರಾಜಕೀಯ ಭಾಷಣ ಮಾಡಿ, ಇನ್ನೊಬ್ಬರನ್ನು ನಿಂದನೆ ಮಾಡಲು ಬಂದಿಲ್ಲ. ನನ್ನ ಯೋಜನೆಗಳನ್ನು ಜನರ ಮುಂದಿಟ್ಟು ಮತ ಕೇಳಲು ಬಂದಿದ್ದೇನೆ. ಇವತ್ತು ಕಾಂಗ್ರೆಸ್ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ನಾಡಿನ ಜನತೆಗೆ ಬೇಡುವ ಸ್ಥಿತಿ ತಂದೊಡ್ಡುವ ರೀತಿ ಇದೆ ಆ ಪ್ರಣಾಳಿಕೆ. ನಮ್ಮ ಪಂಚರತ್ನ ಕಾರ್ಯಕ್ರಮ ಹಾಗಲ್ಲ, ಎಲ್ಲರೂ ಸದೃಢವಾಗಿ ಇರಬೇಕು, ಪ್ರತಿ ಕುಟುಂಬವೂ ಸ್ವಾಭಿಮಾನದಿಂದ ಬದುಕುವಂತೆ ಶಕ್ತಿ ತುಂಬಲಿದೆ’ ಎಂದರು.

‘5 ವರ್ಷದ ಆಡಳಿತದ ಸರಕಾರವನ್ನು ಜನತಾದಳಕ್ಕೆ ಕೊಡಿ. ನೀವು ಮೆಚ್ಚುವ ಆಡಳಿತ ಕೊಡುತ್ತೇನೆ. ಅಧಿಕಾರಕ್ಕೇರಿ ನಾನು ಮುಖ್ಯಮಂತ್ರಿ ಆಗಿ ಮೆರೆಯಬೇಕು ಅಂತಲ್ಲ. ಎಲ್ಲರೂ ನೆಮ್ಮದಿಯಿಂದ ಬಾಳುವಂತ ಸರಕಾರ ಕೊಡುತ್ತೇನೆ. ಶ್ರೀಮಂತ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನ ಬಡವರ ಮಕ್ಕಳೂ ಪಡೆಯಬೇಕು. ಬಡವರ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡ್ತೇವೆ ಎಂದು ಕುಮಾರಸ್ವಾಮಿ ನುಡಿದರು.

‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಂತಹ ಮಾರಣಾಂತಿಕ ಕಾಯಿಲೆ ಬಂದರೂ ಉಚಿತ ಚಿಕಿತ್ಸೆ ಸಿಗಲಿದೆ. ಅಪರೂಪದ ಖಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಕೊಡಿಸುತ್ತೇವೆ. ನಾನು ಜಾತಿ-ಧರ್ಮ ನೋಡುವುದಿಲ್ಲ. ಸರ್ವರಿಗೂ ಒಳ್ಳೆಯದಾಗಬೇಕು, ಸಮಾನ ಸೌಲಭ್ಯಗಳು ಸಿಗಬೇಕು. ಇದೇ ನನ್ನ ಆಶಯ. ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣವೇ ನನ್ನ ಗುರಿ ಎಂದು ಕುಮಾರಸ್ವಾಮಿ ಹೇಳಿದರು.

‘ಚುನಾವಣೆಗೆ ವಿಪಕ್ಷಗಳ ಹಣವನ್ನು ನೀರಿನಂತೆ ಚೆಲ್ಲುತ್ತಿದ್ದಾರೆ. ನಾನು ದುಡ್ಡನ್ನ ಎಲ್ಲಿಂದ ತರಲಿ ಎಂದು ಸಿದ್ದುಬಂಡಿ ಕಣ್ಣೀರು ಹಾಕುತ್ತಿದ್ದಾರೆಂದ ಕುಮಾರಸ್ವಾಮಿ, ಸಿದ್ದುಬಂಡಿಗೆ ನಾನು ಸಮಾಧಾನ ಹೇಳಿದ್ದೇನೆ. ಧೈರ್ಯ ತುಂಬಿದ್ದೇನೆ. ಜನರೇ ನಿಮ್ಮ ಆಸ್ತಿ ಎಂದು ಅವರಿಗೆ ಹೇಳಿ ಸಮಾಧಾನಪಡಿಸಿದ್ದೇನೆ ಎಂದರು. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹೀಂ, ಪಕ್ಷದ ಕಾರ್ಯಾಧ್ಯಕ್ಷ ಆಲ್ಕೊಡ್ ಹನುಮಂತಪ್ಪ, ಸಿಂಧನೂರು ಜೆಡಿಎಸ್ ಅಭ್ಯರ್ಥಿ ವೆಂಕಟರಾವ್ ನಾಡಗೌಡ ಹಾಜರಿದ್ದರು.

share
Next Story
X