ಇರಾನ್ ಅಧ್ಯಕ್ಷರನ್ನು ಭೇಟಿ ಮಾಡಿದ ಅಜಿತ್ ದೋವಲ್

ಟೆಹ್ರಾನ್, ಮೇ 2: ಇರಾನ್ಗೆ ಭೇಟಿ ನೀಡಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿಯವರನ್ನು ಭೇಟಿ ಮಾಡಿದರು ಎಂದು ವರದಿಯಾಗಿದೆ.
ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಇಬ್ರಾಹಿಂ ರೈಸಿ `ಭಾರತ-ಇರಾನ್ ಸಂಬಂಧವನ್ನು ನೂತನ ಮಟ್ಟಕ್ಕೆ ಕೊಂಡೊಯ್ಯುವ ಅಗತ್ಯವಿದೆ' ಎಂದರು. ಜಾಗತಿಕ-ಭೌಗೋಳಿಕ-ರಾಜಕೀಯ ಬದಲಾವಣೆಗಳ ದೃಷ್ಟಿಯಿಂದ ಶಾಂಘೈ ಸಹಕಾರ ಸಂಘಟನೆ ಮತ್ತು ಬ್ರಿಕ್ಸ್ನಂತಹ ಗುಂಪುಗಳು ಅತ್ಯಂತ ಪರಿಣಾಮಕಾರಿಯಾಗಿವೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದಾರೆ.
ಬಳಿಕ ಇರಾನ್ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಲಿ ಶಂಖಾನಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರಬ್ದುಲ್ಲಾಹಿನ್ರನ್ನು ಭೇಟಿ ಮಾಡಿದರು. ಈ ಸಂದರ್ಭ ಚಬಹಾರ್ ಬಂದರು ಅಭಿವೃದ್ಧಿ, ಭಯೋತ್ಪಾದನೆ ನಿಗ್ರಹ, ಅಫ್ಘಾನ್ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ವರದಿಯಾಗಿದೆ.
Next Story