Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನನ್ನ ಮನೆ ಮೇಲೆ ದಾಳಿ ನಡೆಸಿದ IT...

ನನ್ನ ಮನೆ ಮೇಲೆ ದಾಳಿ ನಡೆಸಿದ IT ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

''ಸದಾನಂದ ಗೌಡರು ನನಗೆ ಯಾವತ್ತೂ ಆಪ್ತಮಿತ್ರ''

3 May 2023 4:29 PM IST
share
ನನ್ನ ಮನೆ ಮೇಲೆ ದಾಳಿ ನಡೆಸಿದ IT ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ
''ಸದಾನಂದ ಗೌಡರು ನನಗೆ ಯಾವತ್ತೂ ಆಪ್ತಮಿತ್ರ''

ಪುತ್ತೂರು; ನಾನು ಓರ್ವ ತೆರಿಗೆಪಾವತಿದಾರ ಉದ್ಯಮಿ. ವರ್ಷಕ್ಕೆ ಕೋಟ್ಯಂತರ ರೂ. ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಸೋಲಿನ ಹತಾಶೆಯಿಂದ ಬೆಂಗಳೂರಿನ ನನ್ನ ಮನೆಗೆ ಐಟಿ ದಾಳಿ ನಡೆಸಿದೆ. ಆದರೆ ಅಲ್ಲಿ ಅವರಿಗೆ ಏನೂ ಸಿಕ್ಕಿಲ್ಲ. ಬರಿಗೈಲಿ ಹಿಂತಿರುಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸ್ಪಷ್ಟನೆ ನೀಡಿದ್ದಾರೆ.

ಅವರು ಬುಧವಾರ ಪುತ್ತೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಸ್ತುತ ಪುತ್ತೂರಿನ ಜನತೆ ಅಶೋಕ್ ರೈ ಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿರುವುದನ್ನು ಕಂಡು ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಬೇರೆ ಆಯುಧಗಳಿಲ್ಲದೆ ಇದೀಗ ಇನ್ನೊಂದು ಅಸ್ತ್ರವಾಗಿ ಐಟಿ ದಾಳಿ ಮಾಡಿಸಿದ್ದಾರೆ. ಈ ವಿಷಯದಲ್ಲಿಯೂ ಬಿಜೆಪಿ ಸಂಪೂರ್ಣವಾಗಿ ಸೋಲು ಕಂಡಿದೆ ಎಂದರು.

ಮೈಸೂರಿನಲ್ಲಿ ನನ್ನ ಸಹೋದರನ ಮನೆಗೆ ಐಟಿ ದಾಳಿ ನಡೆದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಆವರ ವ್ಯವಹಾರವೇ ಬೇರೆ. ನನ್ನ ವ್ಯವಹಾರವೇ ಬೇರೆ. ಅವರೂ ಓರ್ವ ತೆರಿಗೆ ಪಾವತಿದಾರ. ಅದಕ್ಕೂ ನನಗೂ ಯಾವ ಸಂಬಂಧವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿತ್ತು 1 ಕೋಟಿ ರೂ.!

ಬಿಜೆಪಿ 5 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅದನ್ನು ಪ್ರಶ್ನೆ ಮಾಡಿರುವ ನನ್ನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು, ನನ್ನ ತೇಜೋವಧೆಗೆ ಶ್ರಮಿಸುತ್ತಿದ್ದಾರೆ. ಯಾರಿಗೂ ಬುದ್ಧಿಕಲಿಸುತ್ತೇನೆ ಎಂದು ಹೇಳಿಲ್ಲ. ಬಡವರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಯಾರೊಂದಿಗೂ ನನ್ನದು ರಾಜೀ ಇಲ್ಲ. ನಾನು ಓರ್ವ ಹಿಂದೂ ಆಗಿ ಹಿಂದುತ್ವವನ್ನು ಒಪ್ಪಿಕೊಂಡವ. ಆದರೆ ನನ್ನ ಹಿಂದುತ್ವವು ನನ್ನ ಧರ್ಮವನ್ನು ಪ್ರೀತಿಸಿ ಇನ್ನೊಂದು ಧರ್ಮವನ್ನು ಗೌರವಿಸುವುದು ಎಂದರು.

''ಡೀವಿ’ ನನಗೆ ಯಾವತ್ತೂ ‘ಆಪ್ತಮಿತ್ರ .....''

ರಾಜಕೀಯದಲ್ಲಿ ನಾನೊಬ್ಬ ಸಣ್ಣ ವ್ಯಕ್ತಿ. ಡಿವಿ ಸದಾನಂದ ಗೌಡರು ಬಹಳಷ್ಟು ವರ್ಷಗಳಿಂದ ರಾಜಕೀಯದಲ್ಲಿ ಪಳಗಿದವರು. ರಾಜ್ಯದ ಮುಖ್ಯಮಂತ್ರಿ, ಕೇಂದ್ರದ ಸಚಿವರಾಗಿ ದೇಶದ ರಾಜ್ಯದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿದವರು. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರು ನನ್ನ ಬಗ್ಗೆ ಹೆಚ್ಚು ಮಾತಾಡಿಲ್ಲ. ಆದರೆ ನಾನು ಮಿತ್ರನಲ್ಲ ಶತ್ರು ಎಂದಿದ್ದಾರೆ. ಡಿವಿ ಸದಾನಂದ ಗೌಡರು ನನಗೆ ಯಾವತ್ತೂ ಶತ್ರು ಅಲ್ಲ. ಆಪ್ತಮಿತ್ರರು. ನನಗೆ ಯಾರೂ ಶತ್ರುಗಳಿಲ್ಲ. ಎಲ್ಲರೂ ನನ್ನ ಮಿತ್ರರೇ ಎಂದು ಹೇಳಿದರು.

share
Next Story
X