ಮೋದಿ ರೋಡ್ ಶೋನಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪ: ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ FIR

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋನಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಕಲಬುರಗಿ ಬಿಜೆಪಿ ಜಿಲ್ಲಾ ಅಧ್ಯಕ್ಷರ ವಿರುದ್ಧ ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಕಲಬುರಗಿ ಉತ್ತರ ಮತಕ್ಷೇತ್ರದ ಜೆಡಿಯು ಅಭ್ಯರ್ಥಿ ಶರಣಬಸಪ್ಪ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.
ಮಂಗಳವಾರ ಆಯೋಜಿಸಿದ್ದ ಪ್ರಧಾನಿ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘಿಸಿ ಬಿಜೆಪಿ ಪಕ್ಷದ ಧ್ವಜಗಳು ಮತ್ತು ಕಟೌಟ್ ಹಾಗೂ ಬ್ಯಾನರ್ ಗಳು ಹಾಕಲಾಗಿತ್ತು ಎಂದು ಜೆಡಿಯು ಅಭ್ಯರ್ಥಿ ಶರಣಬಸಪ್ಪ ದೂರಿದ್ದಾರೆ.
Next Story